ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಇಬ್ಬರ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Accident--01

ಮಂಡ್ಯ,ಮೇ20- ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಇಬ್ಬರು ಮೃತಪಟ್ಟು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳ್ಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.   ಬಸವರಾಳು ಗ್ರಾಮದ ನಿವಾಸಿ ಅರುಣ್ (22), ರಾಜು (23) ಮೃತಪಟ್ಟ ದುರ್ದೈವಿಗಳು.  ಕಾರಿನಲ್ಲಿ ಮೂವರು ಶ್ರವಣಬೆಳಗೊಳಕ್ಕೆ ತೆರಳಿ ಸ್ವಗ್ರಾಮ ಬಸರಾಳು ಗ್ರಾಮಕ್ಕೆ ಬರುತ್ತಿದ್ದಾಗ ನಾಗಮಂಗಲ ತಾಲ್ಲೂಕಿನ ಸೋಲೂರು ಗ್ರಾಮದ ಬಳಿ ರಸ್ತೆ ಬದಿ ನಿಂತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದಿದೆ.

ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ , ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ಬೆಳ್ಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments

Sri Raghav

Admin