ಮಂಡ್ಯದಲ್ಲಿ ಇಂದು ಮಧ್ಯರಾತ್ರಿವರೆಗೂ ನಿಷೇಧಾಜ್ಞೆ

ಈ ಸುದ್ದಿಯನ್ನು ಶೇರ್ ಮಾಡಿ

Police--144-Section
ಮಂಡ್ಯ, ಮೇ 20- ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಸ್ಥಿತ್ವಕ್ಕೆ ಬರುತ್ತಿರುವ ಹಿನ್ನಲೆಯಲ್ಲಿ ರಾಜಕೀಯ ಬಡಾವಣೆಗಳ ಕುರಿತಂತೆ ಕಾರ್ಯಕರ್ತರಲ್ಲಿ ಪರ-ವಿರೋಧ ಚರ್ಚೆಗಳು ವ್ಯಕ್ತವಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಇತ್ತೀಚೆಗೆ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರದಲ್ಲೂ ಜೆಡಿಎಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು ಜಿಲ್ಲೆ ಸೂಕ್ಷ್ಮತೆಯಿಂದ ಕೂಡಿರುವ ಹಿನ್ನೆಲೆಯಲ್ಲಿ ಇಂದು ರಾತ್ರಿ 12 ಗಂಟೆವರೆಗೂ ಭಾರತೀಯ ದಂಡ ಸಂಹಿತೆ ಕಲಂ 144 ಜಾರಿಗೊಳಿಸಿ ಜಿಲ್ಲಾಧಿಕಾರಿ ಎನ್.ಮಂಜುಶ್ರೀ ಅವರು ಆದೇಶ ಹೊರಡಿಸಿದ್ದಾರೆ.

ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಕೈಗೊಳ್ಳಲಾಗಿರುವ ಈ ಕ್ರಮವನ್ನು ಯಾವುದೇ ಪಕ್ಷದ ಕಾರ್ಯಕರ್ತರು ಮೀರುವಂತಿಲ್ಲ ಹಾಗೂ ಯಾವುದೇ ವಿಜಯೋತ್ಸವ ಆಚರಿಸದಂತೆ ನಿರ್ಬಂಧ ವಿದಿಸಲಾಗಿದೆ. ಅಲ್ಲದೆ ಜಿಲ್ಲೆಯಲ್ಲಿ ರಸ್ತೆ ತಡೆ ಸೇರಿದಂತೆ ಯಾವುದೇ ರೀತಿಯ ಪ್ರತಿಭಟನೆ ಮಾಡುವಂತಿಲ್ಲ ಎಂದು ಸೂಚಿಸಲಾಗಿದ್ದು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸುವಂತೆ ತಿಳಿಸಿದ್ದಾರೆ.

Facebook Comments

Sri Raghav

Admin