ರಾಜ್ಯ ರಾಜಕೀಯದಲ್ಲಿ ಅಪರೂಪದ ದಾಖಲೆಗಳ ಸೃಷ್ಟಿಗೆ ಕಾರಣವಾದ ‘ಮೇ ಮ್ಯಾಜಿಕ್’

ಈ ಸುದ್ದಿಯನ್ನು ಶೇರ್ ಮಾಡಿ

Maya--01

ಬೆಂಗಳೂರು, ಮೇ 20-ಪ್ರಸಕ್ತ 2018ರ ಮೇ ತಿಂಗಳು ರಾಜ್ಯ ರಾಜಕೀಯದಲ್ಲಿ ಹಲವು ಅಪರೂಪದ ದಾಖಲೆಗಳ ಸೃಷ್ಟಿಗೆ ಕಾರಣವಾಗಿದೆ. ಮೇ ತಿಂಗಳ ಒಂದರಲ್ಲೇ ರಾಜ್ಯ ಮೂವರು ಮುಖ್ಯಮಂತ್ರಿಗಳನ್ನು ಕಾಣುವಂತಾಗಿದೆ. ಮೇ 15ರವರೆಗೂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದರು. ಜೊತೆಗೆ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ಕೀರ್ತಿಗೂ ಪಾತ್ರರಾದರು.2013ರ ಮೇ 15 ರಿಂದ 2018ರ ಮೇ 15ರವರೆಗೂ 23ನೆ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಐದು ವರ್ಷ ಪೂರ್ಣಗೊಳಿಸಿದರು.

ಮೇ 17 ರಂದು ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಿ.ಎಸ್.ಯಡಿಯೂರಪ್ಪ ಅವರು ನಿನ್ನೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ಇದರಿಂದ ಮೂರು ದಿನಗಳ ಕಾಲ ಯಡಿಯೂರಪ್ಪ ಮುಖ್ಯಮಂತ್ರಿ ಯಾಗಿದ್ದರು. ಈ ಹಿಂದೆ 2007ರಲ್ಲಿ ಕೇವಲ 7 ದಿನಗಳ ಕಾಲ ಮುಖ್ಯಮಂತ್ರಿಯಾಗಿ ನಿರ್ಮಿಸಿದ್ದ ತಮ್ಮದೇ ದಾಖಲೆಯನ್ನು ಯಡಿಯೂರಪ್ಪ ಮುರಿದಿದ್ದಾರೆ.  ಮೇ 23 ರಂದು ರಾಜ್ಯದ 25ನೆ ಮುಖ್ಯಮಂತ್ರಿಯಾಗಿ ಎಚ್.ಡಿ.ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಹೀಗಾಗಿ ರಾಜ್ಯದ ರಾಜಕೀಯದಲ್ಲಿ ಮೇ ತಿಂಗಳು ಈ ಹೊಸ ದಾಖಲೆಗಳಿಗೆ ಕಾರಣವಾಗಿದೆ.

Facebook Comments

Sri Raghav

Admin