ಶ್ರೀರಂಗಂನ ರಂಗನಾಥ ದೇಗುಲದಲ್ಲಿ ಎಚ್‍ಡಿಕೆ ವಿಶೇಷ ಪೂಜೆ

ಈ ಸುದ್ದಿಯನ್ನು ಶೇರ್ ಮಾಡಿ

Kumaraswamy--01

ಬೆಂಗಳೂರು, ಮೇ 20- ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತಮಿಳುನಾಡಿನ ತಿರುಚಿಯ ಶ್ರೀರಂಗಂನಲ್ಲಿರುವ ರಂಗನಾಥಸ್ವಾಮಿ ದೇವಾಲಯದಲ್ಲಿ ಇಂದು ವಿಶೇಷ ಪೂಜೆ ಸಲ್ಲಿಸಿದರು.  ಇಂದು ಮಧ್ಯಾಹ್ನ ಬೆಂಗಳೂರಿನಿಂದ ತಿರುಚಿಗೆ ತೆರಳಿದ ಕುಮಾರಸ್ವಾಮಿ ಅವರು ಶ್ರೀರಂಗಂನಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಮಾಜಿ ಸಚಿವ ಎಚ್.ಡಿ.ರೇವಣ್ಣ ಅವರೊಂದಿಗೆ ಕುಮಾರಸ್ವಾಮಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಬುಧವಾರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ಅದಕ್ಕೂ ಮುನ್ನ ಕುಮಾರಸ್ವಾಮಿ ದೇವಾಲಯಗಳಿಗೆ ಭೇಟಿ ನೀಡುತ್ತಿದ್ದಾರೆ. ನಿನ್ನೆ ಸಂಜೆ ರಾಜ್ಯಪಾಲರನ್ನು ಭೇಟಿ ಮಾಡಿ ಪ್ರಮಾಣವಚನ ಸ್ವೀಕರಿಸಲು ದಿನಾಂಕ ನಿಗದಿಪಡಿಸಿದ ಬೆನ್ನಲ್ಲೇ ಆದಿಚುಂಚನಗಿರಿ ಮಠಾಧೀಶರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ಆಶೀರ್ವಾದ ಪಡೆದರು.

Facebook Comments

Sri Raghav

Admin