2019ರ ಲೋಕಸಭೆ ಚುನಾವಣೆಯಲ್ಲೂ ಕಾಂಗ್ರೆಸ್-ಜೆಡಿಎಸ್ ಮೆತ್ರಿ ಸುಳಿವು ನೀಡಿದ ಖರ್ಗೆ..!

ಈ ಸುದ್ದಿಯನ್ನು ಶೇರ್ ಮಾಡಿ

Kharge-Congress
ಬೆಂಗಳೂರು,ಮೇ 20-ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಈ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಳ್ಳುವ ಮುನ್ಸೂಚನೆಯನ್ನು ಕಾಂಗ್ರೆಸ್ ಸಂಸದೀಯ ನಾಯಕ ಮಲ್ಲಿಕಾರ್ಜುನ ಖರ್ಗೆ ನೀಡಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್, ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡು ಚುನಾವಣೆ ಎದುರಿಸುವ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದರು.

ಎರಡು ಜಾತ್ಯತೀತ ಪಕ್ಷಗಳು ಒಟ್ಟಾಗಿ ಹೋಗುವುದು ಒಳಿತು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿರುವ ಅವರು, ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಸರ್ಕಾರ ರಚನೆಯಾಗಿರುವುದು ಪ್ರಜಾಪ್ರಭುತ್ವಕ್ಕೆ ಮತ್ತು ದೇಶಕ್ಕೆ ಒಳ್ಳೆಯದು ಎಂದು ಹೇಳಿದರು. ಬಿಜೆಪಿಗೆ ಹೆಚ್ಚು ಸ್ಥಾನಗಳು ಬಂದಿದ್ದರೂ ರಾಜ್ಯದ ಜನ ಕಾಂಗ್ರೆಸ್‍ಗೆ ಹೆಚ್ಚು ಮತ ಹಾಕಿದ್ದಾರೆ. ಶೇಕಡವಾರು ಮತ ಪಡೆದ ಪ್ರಮಾಣದಲ್ಲಿ ಕಾಂಗ್ರೆಸ್ ಮುಂದಿದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಇನ್ನು ಹೆಚ್ಚಿನ ಸ್ಥಾನಗಳನ್ನು ಪಡೆದು ಅಧಿಕಾರಕ್ಕೆ ಬರಲಿದೆ ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಅವರ ಮಾತುಗಳನ್ನು ದೇಶದ ಜನ ಈಗ ನಂಬುತ್ತಿಲ್ಲ ಎಂದು ಖರ್ಗೆ ತಿಳಿಸಿದರು.

Facebook Comments

Sri Raghav

Admin