ನನ್ನನ್ನು ಮಂತ್ರಿ ಮಾಡಲಿ, ಬಿಡಲಿ ಕೆಲಸವನ್ನು ಮಾಡುತ್ತೇನೆ

ಈ ಸುದ್ದಿಯನ್ನು ಶೇರ್ ಮಾಡಿ

GT-Devegowda--01
ಬೆಂಗಳೂರು, ಮೇ 21-ಸಚಿವ ಸ್ಥಾನದ ಬಗ್ಗೆ ತಮಗೆ ಯಾವುದೇ ಆಶಯ ಇಲ್ಲ ಎಂದು ಮಾಜಿ ಸಚಿವ ಜಿ.ಟಿ.ದೇವೇಗೌಡ ತಿಳಿಸಿದ್ದಾರೆ. ಮೈಸೂರು ಭಾಗದ ಜನರು ತಮ್ಮನ್ನು ಮಂತ್ರಿ ಮಾಡಬೇಕೆಂದು ಅಪೇಕ್ಷೆ ಪಟ್ಟಿದ್ದಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರಿಗೆ ತಿಳಿಸಿದರು.

. ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡಲು ಸಿದ್ಧವಿದ್ದೇನೆ ಎಂದು ಹೇಳಿದರು.
ಬುಧವಾರ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಗುರುವಾರ ವಿಧಾನಸಭೆ ಸಭಾಧ್ಯಕ್ಷರನ್ನು ಆಯ್ಕೆ ಮಾಡಲಾಗುತ್ತದೆ. ವಿಧಾನಸಭೆಯಲ್ಲಿ ಕುಮಾರಸ್ವಾಮಿಯವರು ಬಹುಮತ ಸಾಬೀತುಪಡಿಸಿದ ನಂತರ ಖಾತೆ ಹಾಗೂ ಸಚಿವ ಸ್ಥಾನ ಹಂಚಿಕೆ ಕುರಿತು ಜೆಡಿಎಸ್ ಹಾಗೂ ಕಾಂಗ್ರೆಸ್ ನಾಯಕರು ಮಾತನಾಡಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದರು.

Facebook Comments