ನಿಂತಿದ್ದ ಲಾರಿಗೆ ಬಸ್ ಡಿಕ್ಕಿ ಹೊಡೆದು 10 ಮಂದಿ ದುರ್ಮರಣ

ಈ ಸುದ್ದಿಯನ್ನು ಶೇರ್ ಮಾಡಿ

Truck--01

ಗುನ (ಎಂ.ಪಿ.), ಮೇ 21-ನಿಂತಿದ್ದ ಲಾರಿಯೊಂದಕ್ಕೆ ಬಸ್ ಅಪ್ಪಳಿಸಿ ಶಿಶು ಸೇರಿದಂತೆ 10 ಮಂದಿ ಮೃತಪಟ್ಟು, ಇತರ 47 ಪ್ರಯಾಣಿಕರು ತೀವ್ರ ಗಾಯಗೊಂಡಿರುವ ದುರಂತ ಇಂದು ಮುಂಜಾನೆ ಮಧ್ಯಪ್ರದೇಶದ ಗುನ ಜಿಲ್ಲೆಯಲ್ಲಿ ಸಂಭವಿಸಿದೆ.  ಉತ್ತರ ಪ್ರದೇಶದ ಬಂಡಾದಿಂದ ಗುಜರಾತ್‍ನ ಅಹಮದಾಬಾದ್‍ಗೆ ತೆರಳುತ್ತಿದ್ದ ಖಾಸಗಿ ಬಸ್ ಮುಂಜಾನೆ 4.30ರಲ್ಲಿ ರುಥಿಯಾಲ್ ಪಟ್ಟಣದ ಬಳಿ ರಸ್ತೆ ಬದಿ ನಿಂತಿದ್ದ ಟ್ರಕ್ಕಿಗೆ ಹಿಂದಿನಿಂದ ಡಿಕ್ಕಿ ಹೊಡೆಯಿತು ಎಂದು ಗುನ ಪೊಲೀಸ್ ಠಾಣೆಯ ಅಧಿಕಾರಿ ವಿವೇಕ್ ಆಸ್ತಾನ ಹೇಳಿದ್ದಾರೆ.ಬಸ್ ಚಾಲಕ ಸೇರಿದಂತೆ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟರೆ, ತೀವ್ರ ಗಾಯಗೊಂಡ ಮೂವರು ಜಿಲ್ಲಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಈ ದುರ್ಘಟನೆಯಲ್ಲಿ ಒಂದೂವರೆ ವರ್ಷದ ಹೆಣ್ಣು ಮಗು ಮತ್ತು ಒಂಭತ್ತು ಪುರುಷರು ಮೃತಪಟ್ಟಿದ್ದಾರೆ.   ಗಾಯಗೊಂಡವರನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಮೂವರ ಸ್ಥಿತಿ ಶೋಚನೀಯವಾಗಿದೆ ಎಂದು ಅವರು ಹೇಳಿದ್ದಾರೆ.

Facebook Comments

Sri Raghav

Admin