ಹೆಚ್’ಡಿಕೆ ಪಟ್ಟಾಭಿಷೇಕಕ್ಕೆ ಸಾಕ್ಷಿಯಾಗಲಿದ್ದಾರೆ ಮಾಯಾವತಿ

ಈ ಸುದ್ದಿಯನ್ನು ಶೇರ್ ಮಾಡಿ

kumaraswamy-mayavati

ಬೆಂಗಳೂರು, ಮೇ 21-ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕರಿಸುವ ಸಮಾರಂಭದಲ್ಲಿ ಬಿಎಸ್‍ಪಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಾಯಾವತಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಎಸ್‍ಪಿ ಶಾಸಕ ಮಹೇಶ್ ತಿಳಿಸಿದ್ದಾರೆ. ದೇವನಹಳ್ಳಿ ಬಳಿಯ ರೆಸಾರ್ಟ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ರಾಜ್ಯಾಧ್ಯಕ್ಷರಾದ ಎಚ್.ಡಿ.ಕುಮಾರಸ್ವಾಮಿ ಅವರು ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಬರುವಂತೆ ಮಾಯಾವತಿ ಅವರಿಗೆ ಆಹ್ವಾನ ನೀಡಿದ್ದಾರೆ ಎಂದರು.

ನಾನೂ ಕೂಡ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದರೂ ಈ ತನಕ ಯಾವುದೇ ಸಚಿವ ಸ್ಥಾನ ಬೇಡಿಕೆ ಇಟ್ಟಿಲ್ಲ. ಆದರೆ ಸಮಾಜಕಲ್ಯಾಣ ಸಚಿವನಾಗಿ ಸೇವೆ ಮಾಡುವ ಅಪೇಕ್ಷೆ ಇದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಬಿಎಸ್‍ಪಿ ಪಕ್ಷವನ್ನು ಕಟ್ಟಿ ಬಲಗೊಳಿಸಲು ಪ್ರಯತ್ನಿಸುವುದಾಗಿ ಹೇಳಿದ ಅವರು, ಚುನಾವಣೆಯ ಒತ್ತಡ ಮರೆತು ನಾವೆಲ್ಲ ರಿಲ್ಯಾಕ್ಸ್ ಮೂಡ್‍ನಲ್ಲಿದ್ದೇವೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

Facebook Comments

Sri Raghav

Admin