ಕುಮಾರಸ್ವಾಮಿ ಜೊತೆ ಪ್ರಮಾಣ ವಚನ ಸ್ವೀಕರಿಸುವವರ ಪಟ್ಟಿ ಸಂಜೆ ಫೈನಲ್

ಈ ಸುದ್ದಿಯನ್ನು ಶೇರ್ ಮಾಡಿ

Kumaraswmy
ಬೆಂಗಳೂರು, ಮೇ 22-ವಿಧಾನಸೌಧದ ಮುಂಭಾಗ ನಾಳೆ ತಮ್ಮೊಂದಿಗೆ ಯಾರ್ಯಾರು ಪ್ರಮಾಣ ವಚನ ಸ್ವೀಕರಿಸಬೇಕು ಎಂಬುದನ್ನು ಇಂದು ಸಂಜೆ ನಿರ್ಧಾರ ಮಾಡುವುದಾಗಿ ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಮುಖ್ಯಮಂತ್ರಿಯಾಗಿ ತಾವೊಬ್ಬರೇ ಪ್ರಮಾಣ ವಚನ ಸ್ವೀಕರಿಸುವುದಿಲ್ಲ. ತಮ್ಮೊಂದಿಗೆ ಇನ್ನೂ ಕೆಲವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಾಳೆ ಪ್ರಮಾಣ ವಚನ ಸ್ವೀಕರಿಸುವವರ ಪಟ್ಟಿ ಸಂಜೆ ಅಂತಿಮಗೊಳ್ಳಲಿದೆ ಎಂದ ಅವರು, ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ವೇಣುಗೋಪಾಲ್ ಅವರ ಜೊತೆ ಚರ್ಚೆ ಮಾಡಿ ನಿರ್ಧಾರ ಮಾಡಲಾಗುವುದು ಎಂದು ಹೇಳಿದರು. ತುಮಕೂರಿನ ಸಿದ್ದಗಂಗಾ ಮಠದ ಮಠಾಧೀಶರಾದ ಡಾ.ಶ್ರೀ ಶಿವಕುಮಾರಸ್ವಾಮೀಜಿಯವರ ಆಶೀರ್ವಾದ ಪಡೆಯುವುದಾಗಿ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

Facebook Comments

Sri Raghav

Admin