ತೆಂಗಿನ ಸಸಿ ಸಬ್ಸಿಡಿ ಹಣ ರೈತರ ಖಾತೆಗೆ ಜಮಾ

ಈ ಸುದ್ದಿಯನ್ನು ಶೇರ್ ಮಾಡಿ

baby-coconut-tree-1
ಪಾಂಡವಪುರ, ಮೇ 22-ಭಾರತ ಸರ್ಕಾರದ ತೆಂಗು ಅಭಿವೃದ್ಧಿ ಮಂಡಳಿಯ ಪ್ರಾಯೋಜಕತ್ವದಲ್ಲಿ ತಾಲ್ಲೂಕಿನ ಕೆನ್ನಾಳು ಗ್ರಾಮದ ಶೋಭಿತ ನಂಜೇಗೌಡ ತೆಂಗಿನ ಸಸಿ ಫಾರಂನಲ್ಲಿ 2016-17ನೇ ಸಾಲಿನಲ್ಲಿ ರೈತರಿಗೆ ವಿತರಿಸಲಾಗಿದ್ದ ತೆಂಗಿನ ಸಸಿಯ ಸಬ್ಸಿಡಿ ಹಣವನ್ನು ರೈತರ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗಿದೆ ಎಂದು ಫಾರಂ ಮಾಲೀಕ ಚಂದ್ರಶೇಖರ್ ತಿಳಿಸಿದ್ದಾರೆ.

ಕಳೆದ ಸಾಲಿನಲ್ಲಿ ರಾಜ್ಯದ ವಿವಿಧ ಭಾಗದ ರೈತರಿಗೆ ಸುಮಾರು 10ಸಾವಿರ ನಾಟಿ ತೆಂಗಿನ ಸಸಿಗಳನ್ನು ವಿತರಣೆ ಮಾಡಲಾಗಿತ್ತು. ಸಸಿ ಖರೀದಿಸಿದ ರೈತರ ಬ್ಯಾಂಕ್ ಖಾತೆಗೆ ಭಾರತ ಸರ್ಕಾರದ ತೆಂಗು ಅಭಿವೃದ್ಧಿ ಮಂಡಳಿಯಿಂದ ಸಬ್ಸಿಡಿ ಹಣವನ್ನು ನೇರವಾಗಿ ರೈತರ ಖಾತೆಗೆ ವರ್ಗಾವಣೆಯಾಗಿರುತ್ತದೆ. ಪ್ರಸಕ್ತ ಸಾಲಿನಲ್ಲಿ ಸುಮಾರು 10 ಸಾವಿರ ನಾಟಿ ತೆಂಗಿನ ಸಸಿಗಳು ಫಾರಂನಲ್ಲಿ ಲಭ್ಯವಿದ್ದು ಮೊದಲು ಬಂದವರಿಗೆ ಆದ್ಯತಾನುಸಾರ ಸಸಿ ವಿತರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.  ಮಾಹಿತಿಗಾಗಿ ಕೆನ್ನಾಳು ಚಂದ್ರಶೇಖರ್-9886468237, 8123777608 ಗೆ ಕರೆ ಮಾಡಿ ಸಂಪರ್ಕಿಸಬಹುದು.

Facebook Comments

Sri Raghav

Admin