ಪ್ರಮಾಣವಚನಕ್ಕೂ ಮುನ್ನ ಚಾಮುಂಡೇಶ್ವರಿ ಆಶೀರ್ವಾದ ಪಡೆಯಲಿದ್ದಾರೆ ಹೆಚ್ಡಿಕೆ

ಈ ಸುದ್ದಿಯನ್ನು ಶೇರ್ ಮಾಡಿ

 

Holenarasipura--01-Kumaraswಬೆಂಗಳೂರು, ಮೇ 22- ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಾಳೆ ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ಮೈಸೂರಿನ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ನಾಳೆ ಬೆಳಗ್ಗೆ 8.45ಕ್ಕೆ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ತೆರಳಲಿರುವ ಅವರು, ವಿಶೇಷ ಪೂಜೆ ಸಲ್ಲಿಸಲಿದ್ದಾರೆ.  ಚುನಾವಣೆ ಸಂದರ್ಭದಲ್ಲಿ ಕುಮಾರ ಪರ್ವ ಯಾತ್ರೆಯನ್ನು ಚಾಮುಂಡೇಶ್ವರಿ ಬೆಟ್ಟದಲ್ಲಿ ಆರಂಭಿಸಿದ್ದ ಅವರು, ಮುಖ್ಯಮಂತ್ರಿಯಾಗಿ ಆಡಳಿತ ನಡೆಸುವ ಮುನ್ನವೂ ಚಾಮುಂಡೇಶ್ವರಿ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸುತ್ತಿದ್ದಾರೆ. ನಂತರ ರಾಮನಗರಕ್ಕೆ ಆಗಮಿಸಿ ಅಲ್ಲಿರುವ ಚಾಮುಂಡೇಶ್ವರಿ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿ ಬೆಂಗಳೂರಿಗೆ ಹಿಂದಿರುಗಿ ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

Facebook Comments

Sri Raghav

Admin