ಮುಂಬೈನಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ, 143 ಪ್ರಯಾಣಿಕರು ಸೇಫ್

ಈ ಸುದ್ದಿಯನ್ನು ಶೇರ್ ಮಾಡಿ

Air-India--01

ಮುಂಬೈ, ಮೇ 22-ಗೋವಾದಿಂದ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವೊಂದು ತಾಂತ್ರಿಕ ದೋಷದಿಂದಾಗಿ ಮುಂಬೈನಲ್ಲಿ ತುರ್ತು ಭೂಸ್ಪರ್ಶ ಮಾಡಿದ ಪ್ರಸಂಗ ವರದಿಯಾಗಿದೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಸಿಬ್ಬಂದಿ ಸೇರಿದಂತೆ 143 ಮಂದಿ ಅಪಾಯದಿಂದ ಪಾರಾಗಿದ್ದಾರೆ.  ಎಐ-662 ವಿಮಾನದ ಹೈಡ್ರಾಲಿಕ್ ವ್ಯವಸ್ಥೆಯಲ್ಲಿ ವೈಫಲ್ಯ ಕಂಡು ಬಂದ ನಂತರ ನಿನ್ನೆ ರಾತ್ರಿ 8.36ರಲ್ಲಿ ಪೈಲೆಟ್‍ಗಳು ತುರ್ತು ಭೂಸ್ಪರ್ಶ ಮಾಡಬೇಕಾಯಿತು/ ತಕ್ಷಣ ಮುಂಬೈ ವಿಮಾನನಿಲ್ದಾಣದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಯಿತು. ವಿಮಾನದಲ್ಲಿದ್ದ 143 ಮಂದಿ ಸುರಕ್ಷಿತವಾಗಿ ಭೂಸ್ಪರ್ಶ ಮಾಡಿದರು ಎಂದು ಏರ್ ಇಂಡಿಯಾ ವಕ್ತಾರರು ತಿಳಿಸಿದ್ದಾರೆ. ತುರ್ತು ಭೂಸ್ಪರ್ಶದಿಂದಾಗಿ ಒಂದು ತಾಸು ರನ್‍ವೇನನ್ನು ಇತರ ವಿಮಾನಗಳ ಟೇಕ್-ಆಫ್ ಮತ್ತು ಲ್ಯಾಂಡಿಂಗ್‍ಗಾಗಿ ನಿರ್ಬಂಧಿಸಲಾಗಿತ್ತು.

Facebook Comments

Sri Raghav

Admin