ಶೃಂಗೇರಿಯ ಶಾರದಾಂಬೆ, ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ಕುಮಾರಸ್ವಾಮಿ

ಈ ಸುದ್ದಿಯನ್ನು ಶೇರ್ ಮಾಡಿ

Kumaraswamy--01

ಬೆಂಗಳೂರು, ಮೇ 22-ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಕುಟುಂಬದವರು ಶೃಂಗೇರಿಯ ಶಾರದಾಂಬೆಗೆ ಇಂದು ವಿಶೇಷ ಪೂಜೆ ಸಲ್ಲಿಸಿದರು. ಇಂದು ಬೆಳಗ್ಗೆ ಬೆಂಗಳೂರಿನಿಂದ ತಮ್ಮ ಪತ್ನಿ ಅನಿತಾ ಕುಮಾರಸ್ವಾಮಿ ಅವರೊಂದಿಗೆ ಹೆಲಿಕಾಪ್ಟರ್‍ನಲ್ಲಿ ಧರ್ಮಸ್ಥಳಕ್ಕೆ ತೆರಳಿದ ಕುಮಾರಸ್ವಾಮಿ ಅವರು, ಧರ್ಮಸ್ಥಳದ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.
ನಂತರ ಶೃಂಗೇರಿಗೆ ತೆರಳಿದ ಕುಮಾರಸ್ವಾಮಿ ಅವರು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ತಾಯಿ ಚೆನ್ನಮ್ಮ ದೇವೇಗೌಡ, ಮಾಜಿ ಸಚಿವ ಎಚ್.ಡಿ.ರೇವಣ್ಣ, ಮಾಜಿ ಶಾಸಕಿ ಅನಿತಾ ಕುಮಾರಸ್ವಾಮಿ, ಅನಸೂಯ ಸೇರಿದಂತೆ ತಮ್ಮ ಕುಟುಂಬದ ಸದಸ್ಯರೊಂದಿಗೆ ವಿಶೇಷ ಪೂಜೆ ಸಲ್ಲಿಸಿದರು.

ನಾಳೆ ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ಶೃಂಗೇರಿಯ ಶಾರದಾಂಬೆಗೆ ಇಂದು ಚಂಡಿ ಹೋಮ ನೆರವೇರಿಸಿದರು. ಚುನಾವಣಾ ಪೂರ್ವದಲ್ಲಿ 11 ದಿನಗಳ ಕಾಲ ಶಾರದಾಂಬೆ ಸನ್ನಿಧಿಯಲ್ಲಿ ಯಾಗ ನಡೆಸಿದ್ದರು. ಕಳೆದ ಮೂರು ದಿನಗಳಿಂದ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸುವುದನ್ನು ಮುಂದುವರೆಸಿದ್ದಾರೆ. ಶೃಂಗೇರಿಯಿಂದ ತುಮಕೂರಿನ ಸಿದ್ದಗಂಗಾ ಮಠಕ್ಕೆ ತೆರಳಿದ ಕುಮಾರಸ್ವಾಮಿ ಅವರು ಸಿದ್ದಗಂಗಾ ಮಠದ ಮಠಾಧೀಶರಾದ ಡಾ.ಶ್ರೀ ಶಿವಕುಮಾರಸ್ವಾಮೀಜಿಯವರ ಆಶೀರ್ವಾದ ಪಡೆದರು.

Facebook Comments

Sri Raghav

Admin