ಸಿಬಿಐ,ಐಟಿ ಯಾವುದೇ ದಾಳಿಗೂ ಹೆದರಬೇಡಿ,ನಾವಿದ್ದೇವೆ : ಆನಂದ್‍ಸಿಂಗ್‍ಗೆ ಧೈರ್ಯ ತುಂಬಿದ ಡಿಕೆಶಿ

ಈ ಸುದ್ದಿಯನ್ನು ಶೇರ್ ಮಾಡಿ

DK-Shivakumar-Anand-Sing

ಬೆಂಗಳೂರು, ಮೇ 22- ಸಿಬಿಐ, ಆದಾಯ ತೆರಿಗೆ ಸೇರಿದಂತೆ ಯಾವುದೇ ದಾಳಿಗಳಿಗೂ ಹೆದರಬೇಡಿ, ನಿಮ್ಮೊಂದಿಗೆ ನಾವಿದ್ದೇವೆ. ಬಿಜೆಪಿಯ ಬ್ಲಾಕ್‍ಮೇಲ್‍ಗೆ ಬಲಿಯಾಗಬೇಡಿ ಎಂದು ಆನಂದ್‍ಸಿಂಗ್ ಅವರಿಗೆ ಕಾಂಗ್ರೆಸ್‍ನ ಹಿರಿಯ ನಾಯಕ ಡಿ.ಕೆ.ಶಿವಕುಮಾರ್ ಸಲಹೆ ನೀಡಿದ್ದಾರೆ. ನಗರದ ಹಿಲ್ಟನ್ ಹೋಟೆಲ್‍ನಲ್ಲಿ ಶಾಸಕರೊಂದಿಗೆ ಪ್ರತ್ಯೇಕ ಮಾತುಕತೆ ನಡೆಸಿದ ಡಿ.ಕೆ.ಶಿವಕುಮಾರ್ ಅವರು, ಬಿಜೆಪಿಯವರು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಕೆಡವಲು ಇನ್ನಿಲ್ಲದ ಸರ್ಕಸ್ ಮಾಡುತ್ತಾರೆ. ಅದಕ್ಕಾಗಿ ಸಿಬಿಐ, ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆ ಸೇರಿದಂತೆ ವಿವಿಧ ಸಂಸ್ಥೆಗಳನ್ನು ಬಳಕೆ ಮಾಡಿಕೊಂಡು ಬೆದರಿಸುವ ಪ್ರಯತ್ನ ಮಾಡುತ್ತಾರೆ. ಅದ್ಯಾವುದಕ್ಕೂ ಹೆದರಬೇಡಿ, ನಿಮ್ಮೊಂದಿಗೆ ನಾವಿದ್ದೇವೆ, ಎಂಥಹದ್ದೇ ಸಂದರ್ಭ ಬಂದರೂ ನಿಮ್ಮನ್ನು ಬಿಟ್ಟುಕೊಡುವುದಿಲ್ಲ ಎಂದು ಧೈರ್ಯ ತುಂಬಿದ್ದಾರೆ ಎನ್ನಲಾಗಿದೆ.

ನೀವು ಹಿರಿಯ ಶಾಸಕರು ಎಂಬುದು ನಮ್ಮ ಗಮನದಲ್ಲಿದೆ. ಪಕ್ಷದಲ್ಲಿ ಸೂಕ್ತ ಸ್ಥಾನ ಮಾನ ನೀಡಲಾಗುವುದು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ವಿಶ್ವಾಸ ಮತಯಾಚನೆ ವೇಳೆ ಕಾಂಗ್ರೆಸ್ ಜತೆಯಲ್ಲೇ ಇರಿ ಎಂದು ಹೇಳಿದ್ದಾರೆ ಎಂದು ತಿಳಿದು ಬಂದಿದೆ. ನನ್ನ ಮೇಲೂ ಆದಾಯ ತೆರಿಗೆ ಇಲಾಖೆ ದಾಳಿ ಮಾಡಿತ್ತು. ನಾನು ಅದಕ್ಕೆ ಹೆದರಿ ಕುಳಿತಿದ್ದರೆ ರಾಜಕಾರಣ ಅಲ್ಲಿಗೇ ಮುಗಿದು ಹೋಗುತ್ತಿತ್ತು. ಇಂತಹ ಹಲವಾರು ಪರಿಸ್ಥಿತಿ ಬಂದರೂ ಹೆದರಬಾರದು. ಕಾಂಗ್ರೆಸ್ ಸದಾ ನಿಮ್ಮ ಜತೆಗಿದೆ. ಭಯ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ ಎನ್ನಲಾಗಿದೆ.

Facebook Comments

Sri Raghav

Admin