ನದಿಗೆ ಸ್ನಾನಕ್ಕೆ ತೆರಳಿದ್ದ ಇಬ್ಬರು ಯುವಕರು ನೀರು ಪಾಲು

ಈ ಸುದ್ದಿಯನ್ನು ಶೇರ್ ಮಾಡಿ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬಳ್ಳಾರಿ, ಮೇ 23- ನದಿಗೆ ಸ್ನಾನಕ್ಕೆಂದು ತೆರಳಿದ್ದ ಇಬ್ಬರು ಯುವಕರು ನೀರು ಪಾಲಾದ ಘಟನೆ ಜಿಲ್ಲೆಯಲ್ಲಿ ತುಂಗಭದ್ರ ನದಿಯಲ್ಲಿ ಇಂದು ಬೆಳಗಿನಜಾವ ನಡೆದಿದೆ. ವಿನಯ್‍ಕುಮಾರ್ (16) ವಸಂತಕುಮಾರ (21)ಮೃತಪಟ್ಟ ಯುವಕರು ಇವರೀರ್ವರೂ ಸ್ನಾನಕ್ಕೆಂದು ತುಂಗಭದ್ರ ನದಿಗೆ ತೆರಳಿದ್ದಾರೆ ಈ ವೇಳೆ ನೀರಿನಲ್ಲಿ ಇಬ್ಬರು ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ತಕ್ಷಣವೇ ಪೊಲೀಸರು ಮತ್ತು ಈಜು ತಜ್ಞರು ಶವಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಸ್ಥಳಿಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments

Sri Raghav

Admin