ಪಲಾಯನ ಮಾಡದೆ ಜನರ ನಿರೀಕ್ಷೆಯಂತೆ ಕೆಲಸ ಮಾಡುತ್ತೇನೆ : ಕುಮಾರಸ್ವಾಮಿ

ಈ ಸುದ್ದಿಯನ್ನು ಶೇರ್ ಮಾಡಿ

Kumaraswamy--01
ಬೆಂಗಳೂರು, ಮೇ 23- ಯಾವುದೇ ಕಾರಣಕ್ಕೂ ಪಲಾಯನ ಮಾಡುವುದಿಲ್ಲ, ನಾಡಿನ ಜನರ ನಿರೀಕ್ಷೆಯಂತೆ ಕೆಲಸ ಮಾಡುವುದಾಗಿ ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಜೆ.ಪಿ.ನಗರದಲ್ಲಿರುವ ತಮ್ಮ ನಿವಾಸದಿಂದ ಮೈಸೂರಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನತೆಗೆ ನೀಡಿರುವ ಮಾತನ್ನು ಉಳಿಸಿಕೊಳ್ಳುವುದಾಗಿ ಅವರು ಹೇಳಿದರು. ಮುಖ್ಯಮಂತ್ರಿಯಾಗಿ ಜನ ಸೇವೆ ಮಾಡಬೇಕೆಂಬ ಅಪೇಕ್ಷೆ ಇದೆಯೇ ಹೊರತು ವೈಯಕ್ತಿಕ ಉದ್ದೇಶ ಇಲ್ಲ ಎಂದು ಸ್ಪಷ್ಟಪಡಿಸಿದರು.

ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗುವ ಅವಕಾಶವನ್ನು ದೇವರನ್ನು ಒದಗಿಸಿಕೊಟ್ಟಿದ್ದು, ಜನರ ಸೇವೆ ಮಾಡಲು ಆ ಅವಕಾಶವನ್ನು ಬಳಸಿಕೊಳ್ಳುವುದಾಗಿ ಕುಮಾರಸ್ವಾಮಿ ಹೇಳಿದರು. ಚುನಾವಣಾ ಪೂರ್ವದಲ್ಲಿ ಜನತೆಗೆ ಕೊಟ್ಟಿರುವ ಮಾತನ್ನು ಉಳಿಸಿಕೊಳ್ಳುವುದಾಗಿ ಹೇಳಿದ ಅವರು, ದೇವರು ಕೊಟ್ಟಿರುವ ಈ ಅವಕಾಶವನ್ನು ಜನಸೇವೆಗಾಗಿ ಮೀಸಲಿಟ್ಟಿರುವುದಾಗಿ ತಿಳಿಸಿದರು. ಮುಖ್ಯಮಂತ್ರಿ ಹುದ್ದೆ ತಮ್ಮ ವೈಯಕ್ತಿಕ ಹಿತಕ್ಕಾಗಿ ಅಲ್ಲ, ನಾಡಿನ ಜನರ ಸಮಸ್ಯೆಗೆ ಪರಿಹಾರ ಒದಗಿಸಿ ಅವರ ಸೇವೆ ಮಾಡುವುದಕ್ಕಾಗಿ ಎಂದರು. ನಾಡಿನ ಮುಖ್ಯಮಂತ್ರಿಯಾಗುವ ಅವಕಾಶವನ್ನು ದೇವರು ಒದಗಿಸಿಕೊಟ್ಟಿದ್ದು, ಅದನ್ನು ಜನರಿಗಾಗಿ ಮುಡುಪಾಗಿಡುವುದಾಗಿ ಹೇಳಿದರು.

Facebook Comments

Sri Raghav

Admin