“ಬಿಜೆಪಿಯವರು ಮೈತ್ರಿ ಸರ್ಕಾರ ಪತನವಾಗುವಂತಹ ಕನಸು ಕಾಣುತ್ತಿದ್ದಾರೆ, ಅದು ನನಸಾಗಲ್ಲ”

ಈ ಸುದ್ದಿಯನ್ನು ಶೇರ್ ಮಾಡಿ

Devaraj-JDS--01
ಚಿಕ್ಕಮಗಳೂರು, ಮೇ 23- ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ಯಾವುದೇ ಕಾರಣಕ್ಕೂ ಪಥನವಾಗುವುದಿಲ್ಲ ಬಿಜೆಪಿ ಮುಖಂಡರು ಹಗಲು ಕನಸು ಕಾಣುತಿದ್ದಾರೆ ಎಂದು ಚಿಕ್ಕಮಗಳೂರು ಜೆಡಿಎಸ್ ಉಪಾಧ್ಯಕ್ಷ ಎಚ್.ಎಚ್. ದೇವರಾಜ್ ಹೇಳಿದ್ದಾರೆ. ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಹೆಚ್ಚು ದಿನ ಬಾಳುವುದಿಲ್ಲ ಎಂಬ ಶಾಸಕ ಸಿ.ಟಿ.ರವಿ ಅವರ ಹೇಳಿಕೆಗೆ ಪ್ರತಿಕ್ರೆಯಿಸಿದ ಅವರು ಬಿಜೆಪಿ ಮುಖಂಡರು ಹಗಲುಗನಸು ಕಾಣುತ್ತಿದ್ದಾರೆ ಎಂದು ಟೀಕಿಸಿದರು.

ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ವೆಚ್ಚಾರಿಕವಾದ ಭಿನ್ನಾಭಿಪ್ರಾಯ ಇತ್ತೆ ಹೊರತು, ಸೈದಾಂತಿಕವಾಗಿ ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ ಎರಡು ಪಕ್ಷದ ಮುಖಂಡರು ಈಗಾಗಲೇ ವೈಚಾರಿಕ ಭಿನ್ನಾಭಿಪ್ರಾಯವನ್ನು ಪರಿಹರಿಸಿಕೊಂಡಿದ್ದಾರೆ. ಹಣ ಅಥವಾ ಅಧಿಕಾರಕ್ಕಾಗಿ ಮೈತ್ರಿ ಮಾಡಿಕೊಂಡಿಲ್ಲ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಬದ್ಧತೆ ಇದೆ ರೈತರು, ಬಡವರು, ಕೂಲಿಕಾರ್ಮಿಕg, ಬಗ್ಗೆ ಕಾಳಜಿ ಇದೆ. ಅವರ ಅವಧಿಯಲ್ಲಿ ರಾಜ್ಯದ ಸರ್ವಾಂಗೀಣ ಅಭಿವೃಧ್ದಿ ಯಾಗುತ್ತದೆ. ಎಂದು ವಿಶ್ವಾಸ ವ್ಯಕ್ತಪಡಿಸಿದರು.

Facebook Comments

Sri Raghav

Admin