ವಿಧಾನಸೌಧದಲ್ಲಿ ಕುಮಾರ ಪಟ್ಟಾಭಿಷೇಕದ ಸಿದ್ಧತೆಗಳನ್ನು ಪರಿಶೀಲಿಸಿದ ಗೌಡರು

ಈ ಸುದ್ದಿಯನ್ನು ಶೇರ್ ಮಾಡಿ

Devegowda-Vidhanasoudha--1

ಬೆಂಗಳೂರು, ಮೇ 23-ಇಂದು ಸಂಜೆ ನಿಯೋಜಿತ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ವಿಧಾನಸೌಧದಲ್ಲಿ ಸಿದ್ಧತೆಗಳನ್ನು ಪರಿಶೀಲಿಸಿದರು. ಬೆಳಗ್ಗೆ ದೇವೇಗೌಡರು ಕಾರ್ಯಕ್ರಮ ನಡೆಯುವ ವಿಧಾನಸೌಧದ ಪೂರ್ವ ದ್ವಾರದಲ್ಲಿ ಅಧಿಕಾರಿಗಳು ಕೈಗೊಂಡಿರುವ ಸಿದ್ಧತೆಗಳ ಬಗ್ಗೆ ಮಾಹಿತಿ ಪಡೆದರು. ಸರ್ಕಾರದ ಮುಖ್ಯಕಾರ್ಯದರ್ಶಿ ರತ್ನಪ್ರಭಾ, ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ನೀಲಮಣಿ.ಎನ್ ರಾಜು, ಬೆಂಗಳೂರು ನಗರ ಪೊಲೀಸ್ ಆಯುಕ್ತ ಸುನೀಲ್‍ಕುಮಾರ್, ಹಿರಿಯ ಐಎಎಸ್ ಅಧಿಕಾರಿ ಲಕ್ಷ್ಮಿನಾರಾಯಣ ಸೇರಿದಂತೆ ಮತ್ತಿತರರು ಗೌಡರಿಗೆ ಮಾಹಿತಿ ಒದಗಿಸಿದರು.

Devegoda

ಸಂಜೆ ನಡೆಯುವ ಕಾರ್ಯಕ್ರಮಕ್ಕೆ ದೇಶದ ನಾನಾ ಭಾಗಗಳಿಂದ ಗಣ್ಯಾತಿಗಣ್ಯರು ಆಗಮಿಸಲಿದ್ದಾರೆ. ಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ,ಮುಖ್ಯಮಂತ್ರಿಗಳಾದ ಅರವಿಂದ ಕೇಜ್ರಿವಾಲ್, ಚಂದ್ರಬಾಬು ನಾಯ್ಡು, ಮಮತಾ ಬ್ಯಾನರ್ಜಿ, ಪಿಣರಾಯ್ ವಿಜಯನ್, ಅಮರಿಂದರ್ ಸಿಂಗ್, ಬಿಎಸ್‍ಪಿ ಮುಖ್ಯಸ್ಥೆ ಮಾಯಾವತಿ, ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್, ಸಿಪಿಎಂ ಮುಖಂಡ ಸೀತಾರಾಮ್ ಯೆಚುರಿ, ಆರ್‍ಜೆಡಿಯ ತೇಜಸ್ವಿಯಾದವ್, ಅಜಿತ್ ಸಿಂಗ್, ಚಿತ್ರನಟ ಹಾಗೂ ರಾಜಕಾರಣಿಯಾಗಿರುವ ಕಮಲ ಹಾಸನ್ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಯಾವುದೇ ರೀತಿಯ ಹಿತಕರ ಘಟನೆಗಳು ಸಂಂಭವಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಭಾರೀ ಭದ್ರತೆಯನ್ನು ಕೈಗೊಳ್ಳಲಾಗಿದೆ.

Facebook Comments

Sri Raghav

Admin