ಶುಕ್ರವಾರ ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಲಿದ್ದಾರೆ ಎಚ್‍ಡಿಕೆ

ಈ ಸುದ್ದಿಯನ್ನು ಶೇರ್ ಮಾಡಿ

DSC_0219
ಬೆಂಗಳೂರು, ಮೇ 23-ಮುಖ್ಯಮಂತ್ರಿಯಾಗಿ ಇಂದು ಅಧಿಕಾರ ಸ್ವೀಕರಿಸಿದ ಎಚ್.ಡಿ.ಕುಮಾರಸ್ವಾಮಿ ಅವರು ಶುಕ್ರವಾರ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆ ಮಾಡಲಿದ್ದಾರೆ. ವಿಶ್ವಾಸ ಮತಯಾಚನೆಗೆ ರಾಜ್ಯಪಾಲ ವಿ.ಆರ್.ವಾಲಾ ಅವರು 15 ದಿನಗಳ ಕಾಲಾವಕಾಶ ನೀಡಿದ್ದಾರೆ. ಆದರೆ ಕುಮಾರಸ್ವಾಮಿ ಅವರು ಶುಕ್ರವಾರವೇ ಬಹುಮತ ಸಾಬೀತುಪಡಿಸಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್-ಜೆಡಿಎಸ್ ದೋಸ್ತಿ ವಿಧಾನಸಭೆಯಲ್ಲಿ ಇಬ್ಬರು ಪಕ್ಷೇತರ ಶಾಸಕರ ಬೆಂಬಲದೊಂದಿಗೆ 117 ಸದಸ್ಯರನ್ನು ಹೊಂದಿದೆ. ಸರಳ ಬಹುಮತಕ್ಕೆ 112 ಸದಸ್ಯರ ಬೆಂಬಲದ ಅಗತ್ಯವಿದೆ.

ಇದಕ್ಕೂ ಮುನ್ನ ಶುಕ್ರವಾರ ಬೆಳಗ್ಗೆ ವಿಧಾನಸಭೆಯ ಸ್ಪೀಕರ್ ಹಾಗೂ ಡೆಪ್ಯುಟಿ ಸ್ಪೀಕರ್ ಆಯ್ಕೆ ನಡೆಯಲಿದೆ. ಈಗಾಗಲೇ ಕಾಂಗ್ರೆಸ್ ವತಿಯಿಂದ ಹಿರಿಯ ನಾಯಕ, ಕೋಲಾರ ಜಿಲ್ಲೆ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಶಾಸಕ ರಮೇಶ್ ಕುಮಾರ್ ಅವರು ಸ್ಪೀಕರ್ ಆಗುವುದು ಬಹುತೇಕ ಖಚಿತವಾಗಿದೆ. ಜೆಡಿಎಸ್‍ನಿಂದ ಮಾಜಿ ಸಚಿವ ಹಾಗೂ ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಗೌಡ ಅವರನ್ನು ಡೆಪ್ಯುಟಿ ಸ್ಪೀಕರ್ ಮಾಡುವ ಚಿಂತನೆ ನಡೆದಿದೆ. ಆದರೆ ಈ ಬಗ್ಗೆ ಈವರೆಗೂ ಯಾವುದೇ ತೀರ್ಮಾನವಾಗಿಲ್ಲ.

ಸ್ಪೀಕರ್ ಮತ್ತು ಡೆಪ್ಯುಟಿ ಸ್ಪೀಕರ್ ಆಯ್ಕೆ ಪ್ರಕ್ರಿಯೆ ಮುಗಿದ ನಂತರ ವಿಶ್ವಾಸಮತ ಯಾಚನೆ ನಡೆಯಲಿದೆ. ಅಂದು ಸದನದಲ್ಲಿ ಬಹುಮತ ಸಾಬೀತುಪಡಿಸಿದ ನಂತರ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ.

Facebook Comments

Sri Raghav

Admin