BIG NEWS : ದೇವರು ಮತ್ತು ಕರ್ನಾಟಕ ಜನತೆ ಹೆಸರಲ್ಲಿ ಕುಮಾರಸ್ವಾಮಿ ಸಿಎಂ ಆಗಿ ಪ್ರಮಾಣ

ಈ ಸುದ್ದಿಯನ್ನು ಶೇರ್ ಮಾಡಿ

Kumaraswamy-Parameshwar--01

ಬೆಂಗಳೂರು, ಮೇ 23-ಸಾವಿರಾರು ಸಂಖ್ಯೆಯ ಅಭಿಮಾನಿಗಳ ಹರ್ಷೋದ್ಘಾರ , ಮುಗಿಲು ಮುಟ್ಟಿದ ಜೈಕಾರದ ನಡುವೆ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು  ದೇವರು ಮತ್ತು ಕರ್ನಾಟಕ ಜನತೆ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.   ರಾಜ್ಯದಲ್ಲಿ ಇಂದಿನಿಂದ ಕುಮಾರಪರ್ವ ಆರಂಭವಾಯಿತು.  ವಿಧಾನಸೌಧ ಮುಂಭಾಗದಲ್ಲಿ ಸರಿಯಾಗಿ 4.30ಕ್ಕೆ ರಾಜ್ಯಪಾಲ ವಿ.ಆರ್.ವಾಲಾ ಅವರು ನೂತನ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಉಪಮುಖ್ಯಮಂತ್ರಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರಿಗೆ ಅಧಿಕಾರ ಗೌಪ್ಯತೆ ಬೋಧಿಸಿದರು.

Vidhanasoudha--xxx

ಇದರೊಂದಿಗೆ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಯುಗ ಇಂದು ಆರಂಭವಾಯಿತು. ಕೇವಲ ಕೆಲವೇ ಕೆಲವು ನಿಮಿಷಗಳಲ್ಲಿ ನಡೆದ ಈ ಕಾರ್ಯಕ್ರಮ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ಶಕ್ತಿ ಪ್ರದರ್ಶನ ಎಂದೇ ಹೇಳಲಾಗಿತ್ತು. ಕುಮಾರಸ್ವಾಮಿ ಮತ್ತು ಡಾ.ಜಿ.ಪರಮೇಶ್ವರ್ ಅಧಿಕಾರ ಸ್ವೀಕರಿಸುತ್ತಿದ್ದಂತೆ ರಾಜ್ಯದ ನಾನಾ ಮೂಲೆಗಳಿಂದ ಆಗಮಿಸಿದ್ದ ಸಾವಿರಾರು ಸಂಖ್ಯೆಯ ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು ಜೈಕಾರ ಹಾಕಿ ಪಟಾಕಿ ಸಿಡಿಸಿ ಸಿಹಿ ಹಂಚಿ ಸಂಭ್ರಮಿಸಿದರು.

DSC_0372

ಈ ಹಿಂದೆ ಕುಮಾರಸ್ವಾಮಿ ಅವರು ಬಿಜೆಪಿ-ಜೆಡಿಎಸ್ ದೋಸ್ತಿ ಸರ್ಕಾರದಲ್ಲಿ 2006 ಫೆ.3ರಂದು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ವಿಶೇಷವೆಂದರೆ ಇಂದು ಕೂಡ ಕಾಂಗ್ರೆಸ್‍ನೊಂದಿಗೆ ಮೈತ್ರಿ ಮಾಡಿಕೊಂಡು ಅವರು ಸಿಎಂ ಪಟ್ಟ ಅಲಂಕರಿಸಿದ್ದಾರೆ. ಮತ್ತೊಂದು ವಿಶೇಷವೆಂದರೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬಕ್ಕೆ ಮೂರನೇ ಬಾರಿ ಮುಖ್ಯಮಂತ್ರಿ ಪಟ್ಟ ಒಲಿದಿದೆ. ಈ ಹಿಂದೆ ಒಂದು ಬಾರಿ ದೇವೇಗೌಡರು ಮತ್ತೊಂದು ಬಾರಿ ಕುಮಾರಸ್ವಾಮಿ ಹಾಗೂ ಇಂದು ಅವರೇ ಸಮ್ಮಿಶ್ರ ಸರ್ಕಾರದ ನೇತೃತ್ವವನ್ನು ವಹಿಸಿಕೊಂಡು ಮುಖ್ಯಮಂತ್ರಿಯಾಗಿದ್ದಾರೆ.

DSC_0397

ಇತ್ತೀಚೆಗೆ ಪ್ರಕಟಗೊಂಡ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೂ ಜನಾದೇಶ ಸಿಕ್ಕಿರಲಿಲ್ಲ. ಒಟ್ಟು 222 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 104, ಕಾಂಗ್ರೆಸ್ 78, ಜೆಡಿಎಸ್ 38 ಹಾಗೂ ಇಬ್ಬರು ಪಕ್ಷೇತರರು ವಿಜೇತರಾಗಿದ್ದರು. ಏಕೈಕ ದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿ ಸರ್ಕಾರ ರಚಿಸಿತ್ತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರು ಬಹುಮತ ಸಾಬೀತುಪಡಿಸುವಲ್ಲಿ ವಿಫಲರಾಗಿದ್ದರಿಂದ 55 ಗಂಟೆಯಲ್ಲೇ ರಾಜೀನಾಮೆ ನೀಡಬೇಕಾದ ಪರಿಸ್ಥಿತಿ ಎದುರಾಗಿತ್ತು. ಫಲಿತಾಂಶ ಪ್ರಕಟಗೊಳ್ಳುತ್ತಿದ್ದಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆಗೆ ವೇದಿಕೆ ಸಿದ್ಧಪಡಿಸಿತ್ತು. ವಿಧಾನಸಭೆಯಲ್ಲಿ ಎರಡು ಪಕ್ಷಗಳು ಸರಳ ಬಹುಮತ ಹೊಂದಿರುವುದರಿಂದ ಸದ್ಯಕ್ಕೆ ದೋಸ್ತಿ ಸರ್ಕಾರಕ್ಕೆ ಯಾವುದೇ ಆತಂಕ ಇಲ್ಲ.

DSC_0432

ಕಿಂಗ್ ಮೇಕರ್ ಅಲ್ಲ ಕಿಂಗ್ :
ಹಾಗೆ ನೋಡಿದರೆ ಚುನಾವಣೆಗೂ ಮುನ್ನ ಕುಮಾರಸ್ವಾಮಿ ಅವರು ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ನಾವು ಕಿಂಗ್ ಮೇಕರ್ ಆಗುವುದಿಲ್ಲ. ಬದಲಾಗಿ ನಾವೇ ಕಿಂಗ್ ಆಗುತ್ತೇವೆ ಎಂದು ಹೇಳುತ್ತಿದ್ದ ಮಾತು ನಿಜವಾಗಿದೆ. ಬಿಜೆಪಿಯನ್ನು ಅಧಿಕಾರದಿಂದ ದೂರವಿಡಬೇಕೆಂಬ ಏಕೈಕ ಕಾರಣಕ್ಕಾಗಿ ಪರಸ್ಪರ ಎಷ್ಟೇ ಆರೋಪ-ಪ್ರತ್ಯಾರೋಪ ಮಾಡಿದ್ದರೂ ಹಾವು-ಮುಂಗುಸಿಯಂತಿದ್ದ ಎರಡು ಪಕ್ಷಗಳು ಒಂದಾಗುವ ಮೂಲಕ ಸಮ್ಮಿಶ್ರ ಸರ್ಕಾರಕ್ಕೆ ಕೈ ಜೋಡಿಸಿದ್ದು ಅಚ್ಚರಿಯ ಬೆಳವಣಿಗೆಗಳಲ್ಲೊಂದು.

DSC_0436

Vidhanasoudah--77

ಶಕ್ತಿ ಪ್ರದರ್ಶನ:

ಇನ್ನು ಇಂದು ನಡೆದ ಕುಮಾರಸ್ವಾಮಿ-ಪರಮೇಶ್ವರ್ ಪ್ರಮಾಣ ವಚನ ಸ್ವೀಕಾರ ಸಮಾರಂಭ ಬಿಜೆಪಿ ವಿರುದ್ಧದ ಶಕ್ತಿ ಪ್ರದರ್ಶನದ ವೇದಿಕೆಯಾಯಿತು. 2019ರ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ವಿರುದ್ಧ ಪ್ರಾದೇಶಿಕ ಪಕ್ಷಗಳನ್ನು ಒಗ್ಗೂಡಿಸಿ ಕೇಂದ್ರದಲ್ಲಿ ಅಧಿಕಾರ ಹಿಡಿಯಬೇಕೆಂಬ ಏಕೈಕ ಗುರಿಯೊಂದಿಗೆ ತೃತೀಯ ಹಾಗೂ ಯುಪಿಎ ಮುಖಂಡರು ಭಾಗವಹಿಸಿದ್ದರು. ಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿ, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಮುಖ್ಯಮಂತ್ರಿಗಳಾದ ಅರವಿಂದ ಕೇಜ್ರಿವಾಲ್, ಚಂದ್ರಬಾಬು ನಾಯ್ಡು, ಮಮತಾ ಬ್ಯಾನರ್ಜಿ, ಪಿಣರಾಯ್ ವಿಜಯನ್, ಅಮರೇಂದರ್ ಸಿಂಗ್, ಬಿಎಸ್‍ಪಿ ಮುಖ್ಯಸ್ಥೆ ಮಾಯಾವತಿ, ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್, ಸಿಪಿಎಂ ಮುಖಂಡ ಸೀತಾರಾಮ್ ಯೆಚುರಿ, ಆರ್‍ಜೆಡಿಯ ತೇಜಸ್ವಿಯಾದವ್, ಅಜಿತ್ ಸಿಂಗ್, ಚಿತ್ರನಟ ಹಾಗೂ ರಾಜಕಾರಣಿಯಾಗಿರುವ ಕಮಲ ಹಾಸನ್ ಸೇರಿದಂತೆ ಅನೇಕ ಮುಖಂಡರು ಭಾಗವಹಿಸಿದ್ದರು.

DSC_0466

DSC_0455

DSC_0420

DSC_0280

DSC_0321

 

Facebook Comments

Sri Raghav

Admin