ಟೀಕಿಸುವುದರಲ್ಲೇ ಕಾಲ ಕಳೆಯಬೇಡಿ, ಬಿಜೆಪಿ ನಾಯಕರಿಗೆ ಸಿಎಂ ಹೆಚ್ಡಿಕೆ ಟಾಂಗ್

ಈ ಸುದ್ದಿಯನ್ನು ಶೇರ್ ಮಾಡಿ

Nanjavadhoota--01

ಬೆಂಗಳೂರು, ಮೇ 24- ಬಿಜೆಪಿ ನಾಯಕರು ನಮ್ಮನ್ನು ಟೀಕಿಸುವುದರಲ್ಲೇ ಕಾಲ ಕಳೆಯುತ್ತಿದ್ದಾರೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇಂದಿಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.  ನಗರದ ಪಟ್ಟನಾಯಕನಹಳ್ಳಿಯ ಶ್ರೀ ನಂಜಾವಧೂತ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರು ವಿನಾಕಾರಣ ನಮ್ಮ ಮೇಲೆ ಟೀಕೆ ಮಾಡುವುದನ್ನು ಬಿಡಬೇಕು. ಅದರಲ್ಲೇ ಕಾಲ ಕಳೆಯಬಾರದು ಎಂದು ಟಾಂಗ್ ನೀಡಿದರು. ಸಾಲ ಮನ್ನಾ ಬಗ್ಗೆ ಕಾಂಗ್ರೆಸ್ ನಾಯಕರ ಜತೆ ಚರ್ಚಿಸಿ ಶೀಘ್ರವೇ ನಿರ್ಧಾರ ಕೈಗೊಳ್ಳುತ್ತೇನೆ. ರೈತರ ಸಾಲಮನ್ನಾ ವಿಚಾರವೇ ನನ್ನ ಮೊದಲ ಆದ್ಯತೆ. ಈ ಬಗ್ಗೆ ಅನುಮಾನ ಬೇಡ ಎಂದು ಅವರು ಮತ್ತೊಮ್ಮೆ ಭರವಸೆ ನೀಡಿದರು.

ಪ್ರತಿಜ್ಞಾ ವಿಧಿ ಕಾರ್ಯಕ್ರಮದ ವೇಳೆ ಉಂಟಾದ ಭದ್ರತಾ ಲೋಪದ ಬಗ್ಗೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದೇನೆ ಎಂದು ಅವರು ಸ್ಪಷ್ಟಪಡಿಸಿದರು. ನಾನು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ರಾಜಕೀಯ ವಿದ್ಯಮಾನಗಳು ಹಾಗೂ ಸಾಕಷ್ಟು ಗಹನ ವಿಚಾರಗಳ ಬಗ್ಗೆ ನಮ್ಮ ತಂದೆ, ಜೆಡಿಎಸ್ ವರಿಷ್ಠರಾದ ಎಚ್.ಡಿ.ದೇವೇಗೌಡರೊಂದಿಗೆ ಸಮಾಲೋಚನೆ ನಡೆಸಿದ್ದೇವೆ. ಉತ್ತಮ ಆಡಳಿತ ನೀಡಲು ಉತ್ಸುಕನಾಗಿದ್ದೇನೆ ಎಂದು ಅವರು ಪುನರುಚ್ಚರಿಸಿದರು.

ರಾಜಕೀಯ ವಿದ್ಯಮಾನಗಳ ಬಗ್ಗೆ ಹಲವು ಸಲಹೆಗಳನ್ನು ನೀಡಿದ್ದಾರೆ. ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವುದು, ಜನರ ಹಿತಾಸಕ್ತಿ ಕಾಪಾಡುವುದು, ಸುಭದ್ರ ಸರ್ಕಾರ ನೀಡುವುದರ ಬಗ್ಗೆ ಮಹತ್ವದ ಸಲಹೆಗಳನ್ನು ನೀಡಿದ್ದು, ಚಾಚೂತಪ್ಪದೆ ಅವರ ಸಲಹೆಗಳನ್ನು ನಿರ್ವಹಿಸುವುದಾಗಿ ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

Facebook Comments

Sri Raghav

Admin