ವಿಧಾನಪರಿಷತ್‍ನ 11 ಸ್ಥಾನಗಳಿಗೆ ಚುನಾವಣೆ, ಮೇ 31 ನಾಮಪತ್ರ ಸಲ್ಲಿಸಲು ಕಡೆ ದಿನ

ಈ ಸುದ್ದಿಯನ್ನು ಶೇರ್ ಮಾಡಿ

Vidhana-Parishat

ಬೆಂಗಳೂರು, ಮೇ 24- ರಾಜ್ಯ ವಿಧಾನಸಭೆಯ ಸದಸ್ಯರಿಂದ ವಿಧಾನಪರಿಷತ್ತಿನ 11 ಸದಸ್ಯ ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಇಂದು ಚುನಾವಣಾ ಅಧಿಸೂಚನೆ ಹೊರ ಬಿದ್ದಿದ್ದು, ನಾಮಪತ್ರ ಸಲ್ಲಿಸಲು ಮೇ 31 ಕಡೆ ದಿನವಾಗಿದೆ. ವಿಧಾನಸಭೆಯ ಸದಸ್ಯರಿಂದ ವಿಧಾನಪರಿಷತ್‍ಗೆ ಚುನಾಯಿತರಾಗಿದ್ದ 11 ಸದಸ್ಯರು ಜೂನ್ 17ರಂದು ನಿವೃತ್ತಿ ಆಗಲಿದ್ದಾರೆ. ನಿವೃತ್ತಿಯಿಂದ ತೆರವಾಗುವ 11 ಸ್ಥಾನಗಳಿಗೆ ಭಾರತ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ.

ವಿಧಾನಪರಿಷತ್‍ನ ದ್ವೈವಾರ್ಷಿಕ ಚುನಾವಣೆಗೆ ಸಲ್ಲಿಕೆಯಾಗುವ ನಾಮಪತ್ರಗಳ ಪರಿಶೀಲನೆ ಜೂನ್ 1ರಂದು ನಡೆಯಲಿದ್ದು, ಉಮೇದುವಾರಿಕೆ ವಾಪಸ್ ಪಡೆಯಲು ಜೂನ್ 4ರವರೆಗೆ ಕಾಲಾವಕಾಶ ನೀಡಲಾಗಿದೆ. ಜೂನ್ 11ರಂದು ಬೆಳಗ್ಗೆ 9ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದ್ದು, ಸಂಜೆ 5 ಗಂಟೆಯ ನಂತರ ಮತ ಎಣಿಕೆ ನಡೆದು ಫಲಿತಾಂಶ ಅಂದೇ ಪ್ರಕಟವಾಗಲಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Facebook Comments

Sri Raghav

Admin