ಉತ್ತರ ಕರ್ನಾಟಕ ಭಾಗದವರಿಗೆ ಡಿಸಿಎಂ ಸ್ಥಾನ ನೀಡುವಂತೆ ವಾಟಾಳ್ ಒತ್ತಾಯ

ಈ ಸುದ್ದಿಯನ್ನು ಶೇರ್ ಮಾಡಿ

vattal-nagaraj

ಬೆಂಗಳೂರು, ಮೇ 26-ಅತ್ಯಂತ ಹಿಂದುಳಿದಿರುವ ಹೈದರಾಬಾದ್- ಕರ್ನಾಟಕ ಭಾಗಕ್ಕೆ ಉಪಮುಖ್ಯಮಂತ್ರಿ ಸ್ಥಾನಕ್ಕೆ ನೀಡುವ ಮೂಲಕ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಮತ್ತು ಈ ಭಾಗದ ಅಭಿವೃದ್ದಿಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಹೈದರಾಬಾದ್-ಕರ್ನಾಟಕ ತೀವ್ರವಾಗಿ ಹಿಂದುಳಿದಿದೆ. ಉತ್ತರ ಕರ್ನಾಟಕ ವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಕಲಂ 371ಸಮರ್ಪಕವಾಗಿ ಜಾರಿಯಾಗಿಲ್ಲ. ಹೈದರಾಬಾದ್-ಕರ್ನಾಟಕ ಹಾಗೂ ಉತ್ತರ ಕರ್ನಾಟಕ ಭಾಗಕ್ಕೆ ತಲಾ ಒಂದೊಂದು ಡಿಸಿಎಂ ಹುದ್ದೆ ನೀಡಿ ಅಭಿವೃದ್ಧಿಗೆ ಸರ್ಕಾರ ಸಹಕರಿಸಬೇಕು ಎಂದು ವಾಟಾಳ್ ಹೇಳಿದರು. ಏಕೀಕರಣಗೊಂಡು ಈವರೆಗೂ ಉತ್ತರ ಕರ್ನಾಟಕ ಭಾಗಕ್ಕೆ ಅನ್ಯಾಯವಾಗುತ್ತಲೇ ಬಂದಿದೆ. ಅದಕ್ಕಾಗಿ ಶ್ವೇತಪತ್ರ ಹೊರಡಿಸಿ ಅಭಿವೃದ್ಧಿಗೆ ನಾದಿ ಹಾಡಬೇಕು ಎಂದು ಹೇಳಿದ ವಾಟಾಳ್, ಇದಕ್ಕಾಗಿ ಆಗ್ರಹಿಸಿ ಕೆಂಪೇಗೌಡ ಪ್ರತಿಮೆ ಬಳಿ ನಾಳೆ ಬೆಳಿಗ್ಗೆ ಪ್ರತಿಭಟನೆ ನಡೆಸುವುದಾಗಿ ಹೇಳಿದರು.

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆಯಿಂದ ಕರ್ನಾಟಕಕ್ಕೆ ಅನ್ಯಾಯ ವಾಗುತ್ತದೆ. ಇದರ ಪರವಾಗಿ ದನಿ ಯೆತ್ತಿದ ನಟ ರಜನೀಕಾಂತ್ ಅವರ ಚಲನ ಚಿತ್ರ ಗಳನ್ನು ಯಾವುದೇ ಕಾರಣಕ್ಕೂ ಕರ್ನಾಟಕದಲ್ಲಿ ಪ್ರದರ್ಶನಕ್ಕೆ ಅವಕಾಶ ಕೊಡ ಬಾರದು. ಸದ್ಯದಲ್ಲೇ ಅವರ ಚಿತ್ರವೊಂದು ಕರ್ನಾಟಕದಲ್ಲಿ ಬಿಡುಗಡೆಯಾಗುತ್ತಿದ್ದು, ಅದಕ್ಕೆ ಅವಕಾಶ ನೀಡುವುದಿಲ್ಲ ಎಂದು ಹೇಳಿದರು. ಚಾಮರಾಜನಗರ ವಿಧಾನಸಭಾ ಚುನಾ ವಣೆ ಯಲ್ಲಿ ಇವಿಎಂಗಳ ದೋಷದಿಂದ ನನಗೆ ಸೋಲಾಗಿದೆ. ಈ ಬಗ್ಗೆ ತನಿಖೆ ನಡೆಸಬೇಕೆಂದು ಚುನಾವಣಾ ಆಯೋಗಕ್ಕೆ ದೂರು ನೀಡು ತ್ತೇನೆ, ಮುಂಬರುವ ಚುನಾವಣೆಗಳಲ್ಲಿ ಬ್ಯಾಲೆಟ್ ಪೇಪರ್ ಬಳಸುವಂತೆ ಆಗ್ರಹಿಸಿ ದರು. ಮಕ್ಕಳ ಕಳ್ಳರ ವದಂತಿಯಿಂದ ಅಮಾಯಕರ ಮೇಲೆ ರಾಜ್ಯದೆಲ್ಲೆಡೆ ನಿರಂತರ ಹಲ್ಲೆ ನಡೆಯುತ್ತಿದೆ. ಉದ್ಯೋಗ ಅರಸಿ ಬಂದ ವ್ಯಕ್ತಿಯೊಬ್ಬನನ್ನು ಅಮಾನುಷ ವಾಗಿ ಕೊಂದು ಹಾಕಲಾಗಿದೆ. ಇದು ತಲೆ ತಗ್ಗಿಸುವಂತಹ ವಿಷಯ. ಈ ಸಂಬಂಧ ಅಗತ್ಯ ಜಾಗೃತಿ ಮೂಡಿಸಬೇಕು. ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು. ಬೆಂಗಳೂರಿನಲ್ಲಿ ವದಂತಿಗೆ ಬಲಿಯಾದ ಕಾಲುರಾಮ್ ಎಂಬುವನ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

Facebook Comments