ಜೆಡಿಎಸ್’ನಲ್ಲಿ ಸಚಿವ ಸ್ಥಾನಕ್ಕೆ ತೀವ್ರಗೊಂಡ ಲಾಬಿ

ಈ ಸುದ್ದಿಯನ್ನು ಶೇರ್ ಮಾಡಿ

Kumaraswamy Devegowda

ಬೆಂಗಳೂರು, ಮೇ 26- ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳು ಹೆಚ್ಚಾಗಿದ್ದು, ಎರಡೂ ಪಕ್ಷಗಳ ವರಿಷ್ಠರ ಮೇಲೆ ಒತ್ತಡ ಹೇರುವ ಪ್ರಯತ್ನವನ್ನು ಶಾಸಕರು ಮಾಡುತ್ತಿದ್ದಾರೆ. ಮುಂದಿನ ವಾರ ವಿಸ್ತರಣೆಯಾಗಲಿರುವ ಸಚಿವ ಸಂಪುಟದಲ್ಲಿ ಸ್ಥಾನ ಪಡೆಯಲು ತಮ್ಮದೇ ಆದ ರೀತಿಯಲ್ಲಿ ಲಾಬಿ ನಡೆಸುತ್ತಿದ್ದಾರೆ. ಸಚಿವ ಸ್ಥಾನ ಪಡೆಯಲು ಮುಖ್ಯಮಂತ್ರಿಗಳಿಗೆ ನಾನಾ ರೀತಿಯ ಶಿಫಾರಸ್ಸನ್ನು ಮಾಡುತ್ತಿದ್ದಾರೆ.

ಜೆಡಿಎಸ್‍ನಿಂದ ಸದ್ಯಕ್ಕೆ ಸುಮಾರು 10 ಮಂದಿ ಶಾಸಕರು ಸಂಪುಟ ಸೇರಲಿದ್ದು, ಈಗಾಗಲೇ ಕೆಲವು ಶಾಸಕರಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಅಭಯ ನೀಡಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಸಚಿವ ಸ್ಥಾನದ ಪಟ್ಟಿಯಲ್ಲಿ ಮೇಲುಕೋಟೆ ಶಾಸಕ ಸಿ.ಎಸ್.ಪುಟ್ಟ ರಾಜು, ಹೊಳೆನರಸಿಪುರದ ಶಾಸಕ ಎಚ್.ಡಿ.ರೇವಣ್ಣ, ಹುಣಸೂರು ಶಾಸಕ ಎಚ್.ವಿಶ್ವನಾಥ್, ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ, ಸಕಲೇಶಪುರದ ಎಚ್.ಕೆ.ಕುಮಾರಸ್ವಾಮಿ, ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಕಾಶಂಪೂರ್ ಅವರು ಮುಂಚೂಣಿಯಲ್ಲಿದ್ದಾರೆ ಎಂದು ತಿಳಿದು ಬಂದಿದೆ.

ಮಳವಳ್ಳಿಯ ಡಾ.ಕೆ.ಅನ್ನದಾನಿ, ಚಿಂತಾಮಣಿಯ ಜಿ.ಕೆ.ಕೃಷ್ಣಾರೆಡ್ಡಿ, ಅರಕಲಗೂಡು ಶಾಸಕ ಎ.ಟಿ. ರಾಮಸ್ವಾಮಿ, ಸಿಂಧನೂರು ಕ್ಷೇತ್ರದ ಶಾಸಕ ವೆಂಕಟರಾವ್ ನಾಡಗೌಡ, ಕೋಲಾರದ ಕೆ.ಶ್ರೀನಿವಾಸಗೌಡ ಅವರು ಕೂಡ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ.  ಮಾಜಿ ಪ್ರಧಾನಿ ಎಚ್.ಡಿ.ದೇವೇ ಗೌಡರು ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಯಾವ ಯಾವ ಶಾಸಕರಿಗೆ ಮಂತ್ರಿ ಭಾಗ್ಯ ಕಲ್ಪಿಸಲಿದ್ದಾರೆ ಎಂಬುದನ್ನು ಕಾದು ನೋಡಬೇಕು.

Facebook Comments

Sri Raghav

Admin