ನಾನೇನು ಸನ್ಯಾಸಿಯಲ್ಲ, ನಾನು ಸಚಿವ ಸ್ಥಾನದ ಆಕಾಂಕ್ಷಿ : ಶಾಸಕ ಪುಟ್ಟರಾಜು

ಈ ಸುದ್ದಿಯನ್ನು ಶೇರ್ ಮಾಡಿ

Puttaraju
ಬೆಂಗಳೂರು,ಮೇ 26- ತಾವು ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದು , ಪಕ್ಷ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಮೇಲುಕೋಟೆ ಜೆಡಿಎಸ್ ಶಾಸಕ ಸಿ.ಎಸ್.ಪುಟ್ಟರಾಜು ತಿಳಿಸಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಇಂದು ಬೆಳಗ್ಗೆ ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಸನ್ಯಾಸಿಯಲ್ಲ ಎಂದರು.
ಸಚಿವ ಸ್ಥಾನ ನೀಡಿದರೆ ನಿಭಾಯಿಸುವುದಾಗಿ ಹೇಳಿದ ಪುಟ್ಟರಾಜು ಅವರು ಪಕ್ಷದ ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧವಾಗಿರುವುದಾಗಿ ಹೇಳಿದರು.

ರೈತರಿಗೆ ಕೊಟ್ಟ ಮಾತಿನಂತೆ ಸಾಲಮನ್ನಾ ಮಾಡಲು ತೀರ್ಮಾನಿಸಲಾಗಿದೆ. ಬಿಜೆಪಿಗೆ ಹೆದರಿ ರೈತರ ಸಾಲಮನ್ನಾ ಮಾಡುತ್ತಿಲ್ಲ ಎಂದು ಇದೇ ಸಂದರ್ಭದಲ್ಲಿ ಬಿಜೆಪಿಗೆ ತಿರುಗೇಟು ನೀಡಿದರು.

Facebook Comments

Sri Raghav

Admin