ಹೊಲ ಉಳುಮೆ ಮಾಡುವಾಗ ಟ್ರಾಕ್ಟರ್ ಪಲ್ಟಿಯಾಗಿ ಸ್ಥಳದಲ್ಲೇ ಚಾಲಕ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Tractor--1

ಬಂಗಾರಪೇಟೆ ಮೇ 26- ಹೊಲ ಉಳುಮೆ ವೇಳೆ ಟ್ರಾಕ್ಟರ್ ಪಲ್ಟಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಹಾರೋಹಳ್ಳಿ ಗ್ರಾಮದ ಬಳಿ ನಡೆದಿದೆ. ತಾಲ್ಲೂಕಿನ ತೊರಗನದೊಡ್ಡಿ ನಿವಾಸಿ ಮಂಜುನಾಥ್ (20) ಮೃತ ಟ್ರಾಕ್ಟರ್ ಚಾಲಕ. ಗ್ರಾಮದ ಬಳಿ ಹೊಲ ಉಳುಮೆ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್ ಪಲ್ಟಿಯಾಗಿದ್ದು ಮಂಜುನಾಥ್ ಸ್ಥಳದಲ್ಲೇ ಸಾವನಪ್ಪಿದ್ದರೆ, ಮತ್ತೊಬ್ಬನಿಗೆ ಗಂಭೀರ ಗಾಯಗಳಾಗಿದ್ದು ಚಿಕತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಸಂಭಂದ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಸ್ಥಳಕ್ಕೆ ಸಿಪಿಐ ದಿನೇಶ್ ಪಾಟೀಲ್ ಬೇಟಿ ಪರಿಶೀಲನೆ ನಡೆಸಿದ್ದಾರೆ.

Facebook Comments

Sri Raghav

Admin