ಇಂದು ರಾತ್ರಿ ಸಿಎಂ ಕುಮಾರಸ್ವಾಮಿ ನವದೆಹಲಿಗೆ

ಈ ಸುದ್ದಿಯನ್ನು ಶೇರ್ ಮಾಡಿ

Kumaraswamy-CM
ಬೆಂಗಳೂರು, ಮೇ 27- ಇಂದು ರಾತ್ರಿ ನವದೆಹಲಿಗೆ ತೆರಳಲಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನಾಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ನಾಳೆ ಬೆಳಗ್ಗೆ 11.30ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಎನ್‍ಡಿಎ ಸರ್ಕಾರ ನಾಲ್ಕು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಅವರಿಗೆ ಅಭಿನಂದನೆ ಸಲ್ಲಿಸಲಿರುವ ಅವರು, ರಾಜ್ಯಕ್ಕೆ ಬರಬೇಕಿರುವ ಅನುದಾನ, ಅಭಿವೃದ್ಧಿ ಚಟುವಟಿಕೆಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಅಲ್ಲದೆ, ಹಲವು ಕೇಂದ್ರ ಸಚಿವರುಗಳನ್ನು ಭೇಟಿ ಮಾಡಿ ಮಹತ್ವದ ಸಮಾಲೋಚನೆ ಮಾಡಲಿದ್ದಾರೆ.

ಇದಕ್ಕೂ ಮುನ್ನ ಎಐಸಿಸಿ ಅಧ್ಯಕ್ಷ ರಾಹುಲ್‍ಗಾಂಧಿ ಅವರನ್ನು ಭೇಟಿ ಮಾಡಿ ಸಂಪುಟ ವಿಸ್ತರಣೆ ಬಗ್ಗೆ ಸಮಾಲೋಚಿಸಲಿದ್ದಾರೆ. ಮೈತ್ರಿ ಸರ್ಕಾರ ಸುಗಮ ಆಡಳಿತ, ಸಂಪುಟಕ್ಕೆ ಯಾರ್ಯಾರ ಸೇರ್ಪಡೆ, ಭವಿಷ್ಯದ ಆಡಳಿತ ವೈಖರಿ ಮುಂತಾದ ವಿಷಯಗಳ ಬಗ್ಗೆ ಅವರು ಚರ್ಚೆ ನಡೆಸಲಿದ್ದು, ಮಂಗಳವಾರ ಹಿಂದಿರುಗಲಿದ್ದಾರೆ.

Facebook Comments

Sri Raghav

Admin