ಐಟಿ ಉದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿ ತಲೆಮರೆಸಿಕೊಂಡಿದ್ದವರು ಅಂದರ್

ಈ ಸುದ್ದಿಯನ್ನು ಶೇರ್ ಮಾಡಿ

2-Are

ಬೆಂಗಳೂರು, ಮೇ 27-ಐಟಿ ಉದ್ಯೋಗಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿ ತಲೆಮರೆಸಿಕೊಂಡಿದ್ದ ಇಬ್ಬರು ನಿರುದ್ಯೋಗಿಗಳನ್ನು ಬಂಧಿಸುವಲ್ಲಿ ಜೀವನ್‍ಭೀಮಾ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.  ಬಂಧಿತ ಆರೋಪಿಗಳನ್ನು ನಾಗರಬಾವಿ ನಿವಾಸಿಗಳಾದ ಬಿಲ್ಲಾಲ್ ಹುಸೇನ್ (23) ಹಾಗೂ ಆಲಿ ಅಹಮ್ಮದ್ (28) ಎಂದು ಗುರುತಿಸಲಾಗಿದೆ.

ಕೆಲ ದಿನಗಳ ಹಿಂದೆ ಜೀವನ್‍ಭೀಮಾ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗುತ್ತಿದ್ದ ಐಟಿ ಉದ್ಯೋಗಿಯೊಬ್ಬರಿಗೆ ಬೈಕ್‍ನಲ್ಲಿ ಬಂದ ಇಬ್ಬರು ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿದ್ದರು. ಈ ಕುರಿತಂತೆ ಐಟಿ ಉದ್ಯೋಗಿ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಜೀವನ್‍ಭೀಮಾ ನಗರ ಪೊಲೀಸರು ಕಿರುಕುಳ ನೀಡಿದ ಪ್ರದೇಶದಲ್ಲಿ ಅಳವಡಿಸಲಾಗಿದ್ದ ಸಿಸಿ ಕ್ಯಾಮೆರಾದ ದೃಶ್ಯಾವಳಿಗಳ ಆಧಾರದ ಮೇಲೆ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ವಿಚಾರಣೆಗೊಳ ಪಡಿಸಿದಾಗ ಇಬ್ಬರೂ ನಿರುದ್ಯೋಗಿಗಳಾಗಿದ್ದು, ಜೀವನ್‍ಭೀಮಾ ನಗರ ವ್ಯಾಪ್ತಿಯಲ್ಲಿ ಐಟಿ ಉದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ್ದನ್ನು ಒಪ್ಪಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಜೀವನ್‍ಭೀಮಾ ನಗರ ಪೊಲೀಸರು ಮುಂದಿನ ಕ್ರಮ ಜರುಗಿಸಿದ್ದಾರೆ.

Facebook Comments

Sri Raghav

Admin