ಮತದಾನ ದಿನದಂದು ಜಯನಗರ-ಆರ್.ಆರ್.ನಗರ ವ್ಯಾಪ್ತಿಯ ನೌಕರರಿಗೆ ವೇತನ ಸಹಿತ ರಜೆ

ಈ ಸುದ್ದಿಯನ್ನು ಶೇರ್ ಮಾಡಿ

Voting--011
ಬೆಂಗಳೂರು, ಮೇ 27-ನಗರದ ರಾಜರಾಜೇಶ್ವರಿನಗರ ಹಾಗೂ ಜಯನಗರ ವಿಧಾನಸಭಾ ಕ್ಷೇತ್ರಗಳಿಗೆ ನಡೆಯುವ ಚುನಾವಣೆಯ ಮತದಾನ ದಿನಗಳಂದು ಎರಡೂ ಕ್ಷೇತ್ರಗಳ ವ್ಯಾಪ್ತಿಯ ಮತದಾರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ನೌಕರರಿಗೆ ವೇತನ ಸಹಿತ ರಜೆ ನೀಡಲು ಸರ್ಕಾರ ಆದೇಶಿಸಿದೆ. ನಾಳೆ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ. ಜೂ.11ರಂದು ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಮತದಾನ ನಡೆಯಲಿದೆ.

ಎರಡೂ ಕ್ಷೇತ್ರಗಳಲ್ಲಿರುವ ಅರ್ಹ ಮತದಾರರು ಮತ ಚಲಾಯಿಸುವಂತೆ ಎಲ್ಲ ಕೇಂದ್ರ ಹಾಗೂ ರಾಜ್ಯ ಸರ್ಕಾರಿ ಕಚೇರಿಗಳ, ಶಾಲಾ ಕಾಲೇಜುಗಳ ಸರ್ಕಾರಿ ನೌಕರರಿಗೆ ಮತದಾನದ ದಿನದಂದು ವೇತನ ಸಹಿತ ರಜೆಯನ್ನು ಘೋಷಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.

Facebook Comments

Sri Raghav

Admin