ಸ್ನಾನಕ್ಕೆಂದು ನದಿಗೆ ಇಳಿದ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ

ಈ ಸುದ್ದಿಯನ್ನು ಶೇರ್ ಮಾಡಿ

Crockedile
ಮದ್ದೂರು, ಮೇ 27- ನದಿಯಲ್ಲಿ ಈಜಲು ಹೋಗಿದ್ದ ವ್ಯಕ್ತಿ ಮೊಸಳೆ ಬಾಯಿಗೆ ತುತ್ತಾಗಿರುವ ಘಟನೆ ಹಲಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಾಗಡಿ ತಾಲ್ಲೂಕಿನ ಹೊಸೂರು ನಿವಾಸಿ ವೆಂಟೇಶ್(52) ಮೃತಪಟ್ಟ ದುರ್ದೈವಿ. ಇಂದು ಬೆಳಗ್ಗೆ 8.15ರ ಸಮಯದಲ್ಲಿ ಕುಟುಂಬ ಸಮೇತ ಮುತ್ತತ್ತಿ ಆಂಜನೇಯ ದೇವಸ್ಥಾನಕ್ಕೆ ಬಂದಿದ್ದು, ಈ ವೇಳೆ ಕಾವೇರಿ ನದಿಯಲ್ಲಿ ಸ್ನಾನ ಮಾಡಲು ನೀರಿಗಿಳಿದಿದ್ದರು. ಈ ವೇಳೆ ಮೊಸಳೆಯು ವೆಂಕಟೇಶ್ ಅವರನ್ನು ಎಳೆದುಕೊಂಡು ಹೋಗಿದ್ದು ಆತನ ಕೈ-ಕಾಲು ಮೂಳೆ ಮುರಿದುಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಶವವನ್ನು ಮಳವಳ್ಳಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಶವ ಪರೀಕ್ಷೆ ನಡೆಸಿದ್ದು, ವಾರಸುದಾರರಿಗೆ ಒಪ್ಪಿಸಲಾಗಿದೆ. ಸ್ಥಳಕ್ಕೆ ಪಿಎಸ್‍ಐ ಶ್ರೀಧರ್ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments

Sri Raghav

Admin