ಅನೈತಿಕ ಸಂಬಂಧಕ್ಕೆ ಅಡ್ಡಿ ಬಂದ ಪತಿಯ ಕಥೆ ಮುಗಿಸಿದ ಪತ್ನಿ..!

ಈ ಸುದ್ದಿಯನ್ನು ಶೇರ್ ಮಾಡಿ

Murder-Wife--01

ಟಿ.ನರಸೀಪುರ, ಮೇ 28- ಅನೈತಿಕ ಸಂಬಂಧಕ್ಕೆ ಅಡ್ಡಿಪಡಿಸಿದ ಪತಿಯನ್ನು ಪತ್ನಿಯೇ ಪೆಟ್ರೋಲ್ ಹಾಕಿ ಸುಟ್ಟು ಕೊಲೆಗೈದಿರುವ ಘಟನೆ ತಾಲ್ಲೂಕಿನ ಬನ್ನೂರು ಹೋಬಳಿಯ ಬಿ.ಸೀಹಳ್ಳಿ ಗ್ರಾಮದಲ್ಲಿ ನಡೆದಿದೆ. ಬಿ.ಸೀಹಳ್ಳಿ ಗ್ರಾಮದ ಲೇಟ್ ಅರ್ಕೇಶ್ವರಚಾರ್ ಎಂಬುವವರ ಪುತ್ರ ಶಿವಶಂಕರ್(38) ಎಂಬಾತ ಪತ್ನಿಯ ಅಟ್ಟಹಾಸಕ್ಕೆ ನಲುಗಿ ಸಜೀವವಾಗಿ ದಹನಗೊಂಡು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ದುರ್ದೈವಿ.

ಮೇ 11ರಂದು ಈ ಘಟನೆ ಸಂಭವಿಸಿದ್ದು, ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಪತ್ನಿಯೇ ಪತಿಯನ್ನು ಸಜೀವವಾಗಿ ಹಾಹಿಸಿದ್ದಾಳೆಂದು ಆರೋಪಿಸಲಾಗಿದೆ. ಮೈಸೂರಿನ ಜ್ಯೋತಿನಗರದ ನಿವಾಸಿಯನ್ನು ಬಿ.ಸೀಹಳ್ಳಿ ಗ್ರಾಮದ ಶಿವಶಂಕರ್‍ನೊಂದಿಗೆ 14 ವರ್ಷಗಳ ಹಿಂದೆ ವಿವಾಹ ಮಾಡಿಕೊಡಲಾಗಿತ್ತು. ಶಿವಶಂಕರ್‍ರ ಪತ್ನಿ ಗ್ರಾಮದ ವ್ಯಕ್ತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳೆನ್ನಲಾಗಿದ್ದು, ಈ ಸಂಬಂಧಕ್ಕೆ ಶಿವಶಂಕರ್ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಈ ದುಷ್ಕøತ್ಯ ನಡೆದಿದೆ ಎನ್ನಲಾಗಿದೆ. ಈ ಸಂಬಂಧ ಮೃತನ ಕುಟುಂಬಸ್ಥರು ಬನ್ನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಕೇಸು ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮಕ್ಕೆ ಮುಂದಾಗಿದ್ದಾರೆ.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin