ಕಾಂಗ್ರೆಸ್ ಶಾಸಕ ಸಿದ್ದು ನ್ಯಾಮಗೌಡ ಅಪಘಾತದಲ್ಲಿ ಅಕಾಲಿಕ ಮರಣ, ಗಣ್ಯರ ಸಂತಾಪ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು, ಮೇ 28- ಇಂದು ಬೆಳಗಿನ ಜಾವ 4.30ರ ಸುಮಾರಿನಲ್ಲಿ ಬಾಗಲಕೋಟೆ ಜಿಲ್ಲೆ ತುಳಸಿಗೆರೆ ಸಮೀಪ ಕಾರಿನ ಟಯರ್ ಬ್ಲಾಸ್ಟ್ ಆಗಿ ಸಂಭವಿಸಿದ ಅಪಘಾತದಲ್ಲಿ ಜಮಖಂಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಸಿದ್ದು ನ್ಯಾಮಗೌಡ (70) ಸಾವನ್ನಪ್ಪಿದ್ದಾರೆ. ದೆಹಲಿಯ ನಿಜಾಮುದ್ದೀನ್ ದರ್ಗಾದ ದರ್ಶನ ಪಡೆದು ಹಿಂದಿರುಗಿದ ಶಾಸಕ ಸಿದ್ದು ನ್ಯಾಮೇಗೌಡ ಏರೋಪ್ಲೇನ್ ಮೂಲಕ ಗೋವಾಕ್ಕೆ ಬಂದು ಗೋವಾದಿಂದ ತಮ್ಮ ಕ್ಷೇತ್ರಕ್ಕೆ ಕಾರಿನಲ್ಲಿ ಮರಳುವಾಗ ಬೆಳಗಿನ 4.30ರ ಸುಮಾರಿಗೆ ತುಳಸಿಗೆರೆ ಹತ್ತಿರ ಕಾರು ಬ್ಲಾಸ್ಟ್ ಆಗಿರುವ ಪರಿಣಾಮವಾಗಿ ಎದುರಿಗೆ ಬರುವ ಲಾರಿಯನ್ನು ತಪ್ಪಿಸಲು ಹೋಗಿ ರಸ್ತೆ ಪಕ್ಕದ ಕಂಬಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡರು.

Siddu-Accident-7

ಕೂಡಲೇ ಅವರನ್ನು ಸ್ಥಳೀಯ ಕೆರೋಡಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಯಿತಾದರೂ ಹೃದಯ ಭಾಗಕ್ಕೆ ಹೆಚ್ಚಿನ ಪೆಟ್ಟು ಬಿದ್ದಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.  ಇವರೊಂದಿಗಿದ್ದ ಸಹ ಪ್ರಯಾಣಿಕರಾದ ಜಮಖಂಡಿಯ ಮೌಲಾನಾ ರಜ್ವಿ (54), ಬಾಗಲಕೋಟೆಯ ಅಬ್ದುಲ್ಲಾ ರಶೀದ್ (73), ಸಾಲಾರ, ಚಾಲಕ ಪರಮಾನಂದ ಅಂಬಿ (27), ಅನ್ವರ್ ಮೋಮಿನ್ (49) ಇವರಿಗೂ ಸಣ್ಣಪುಟ್ಟ ಗಾಯಗಳಾಗಿವೆ.

Siddu-Accident-5

ಘಟನೆ ನಡೆದ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಂಶಿಕೃಷ್ಣ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಕಲಾದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಿದ್ದು ನ್ಯಾಮಗೌಡ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬ ವರ್ಗದಲ್ಲಿ ಶೋಕ ಮುಗಿಲುಮುಟ್ಟಿತ್ತು. ಅವರ ನಿವಾಸದತ್ತ ಎಲ್ಲೆಡೆಯಿಂದ ಕಾರ್ಯಕರ್ತರು, ಅಭಿಮಾನಿಗಳು ದಾವಿಸಿದರು. ಬಾಗಲಕೋಟೆ ಜಿಲ್ಲೆ , ಜಮಖಂಡಿ ತಾಲೂಕು ಕ್ರೀಡಾಂಗಣದಲ್ಲಿ ಸಿದ್ದು ನ್ಯಾಮಗೌಡ ಅವರ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.  ಜಮಖಂಡಿಯ ನಾಗನೂರಿನಲ್ಲಿರುವ ಸಕ್ಕರೆ ಕಾರ್ಖಾನೆ ಆವರಣದಲ್ಲಿ ನಾಳೆ ಬೆಳಗ್ಗೆ 10 ಗಂಟೆಗೆ ವೀರಶೈವ ವಿಧಿ-ವಿಧಾನದ ಪ್ರಕಾರ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

Siddu-Accident-4

ಭಾವಪೂರ್ಣ ಶ್ರದ್ಧಾಂಜಲಿ:
ಸಿದ್ದು ನ್ಯಾಮಗೌಡ ಅವರ ನಿಧನಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ , ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ವೇಣುಗೋಪಾಲ್, ಮಲ್ಲಿಕಾರ್ಜುನ ಖರ್ಗೆ, ರಾಮಲಿಂಗಾರೆಡ್ಡಿ, ಡಿ.ಕೆ.ಶಿವಕುಮಾರ್, ಎಸ್.ಆರ್.ಪಾಟೀಲ್, ದಿನೇಶ್ ಗುಂಡೂರಾವ್, ಸೇರಿದಂತೆ ಅನೇಕ ಗಣ್ಯರು ತೀವ್ರ ಶೋಕ ವ್ಯಕ್ತಪಡಿಸಿ ಮೃತರ ಆತ್ಮಕ್ಕೆ ಶಾಂತಿ ಕೋರಿದರು.

Siddu-Accident-2

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಕಾಂಗ್ರೆಸ್ ಹಾಗೂ ಬಿಜೆಪಿ ಮುಖಂಡರು ಬಾಗಲಕೋಟೆ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗೆ ತೆರಳಿ ಸಿದ್ದು ನ್ಯಾಮಗೌಡರಿಗೆ ಶ್ರದ್ಧಾಂಜಲಿ ಅರ್ಪಿಸಿದರು. ಶಾಸಕ ವೀರಣ್ಣ ಸಿ.ಚರಂತಿಮಠ್, ಮುರುಗೇಶ್ ನಿರಾಣಿ, ಟಿ.ಎಚ್.ಪೂಜಾರ್, ಹೂವಪ್ಪ ರಾಥೋಡ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಪಿ.ಸೌದಾಗಾರ್, ಮಾಜಿ ಶಾಸಕ ಜಿ.ಟಿ.ಪಾಟೀಲ್, ಕಾಂಗ್ರೆಸ್ ಮುಖಂಡ ಸಿದ್ದಪ್ಪ ಚಡ್ಡಿ ಮುಂತಾದವರು ಅಂತಿಮ ನಮನ ಸಲ್ಲಿಸಿದರು.

ಬಂದ್ ಕರೆ ವಾಪಸ್:
ಬಾಗಲಕೋಟೆಯಲ್ಲಿ ಬಿಜೆಪಿ ಕರೆ ನೀಡಿದ್ದ ಬಂದ್‍ಅನ್ನು ಸಿದ್ದು ನ್ಯಾಮಗೌಡ ಅವರ ನಿಧನದ ಪ್ರಯುಕ್ತ ಹಿಂಪಡೆದಿರುವುದಾಗಿ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸಿದ್ದು ಸವದಿ ತಿಳಿಸಿದ್ದಾರೆ.

Siddu--01

Siddu-Accident-1

Facebook Comments

Sri Raghav

Admin