ಯಶಸ್ವಿನಿ ಯೋಜನೆ ಕುರಿತು ಅಧಿಕಾರಿಗಳೊಂದಿಗೆ ಸಿಎಂ ಚರ್ಚೆ

ಈ ಸುದ್ದಿಯನ್ನು ಶೇರ್ ಮಾಡಿ

Cm-Kuma

ಬೆಂಗಳೂರು, ಮೇ 29-  ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಯಶಸ್ವಿನಿ ಯೋಜನೆ ಹಾಗೂ ಇತ್ತೀಚೆಗೆ ಜಾರಿಗೊಳಿಸಲಾದ ಅರೋಗ್ಯ ಕರ್ನಾಟಕ ಯೋಜನೆ ಕುರಿತು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದರು.  ಈ ಯೋಜನೆಗಳಿಂದ ಬಡವರಿಗೆ ಹೆಚ್ಚಿನ ಅನುಕೂಲ ಕಲ್ಪಿಸುವ ಕುರಿತು ಎಲ್ಲ ಅಂಶಗಳನ್ನು ಕೂಲಂಕುಷವಾಗಿ ಪರಿಶೀಲಿಸಿ, ಮಾಹಿತಿಯೊಂದಿಗೆ ಸಚಿವ ಸಂಪುಟ ಸಭೆಯಲ್ಲಿ ಮಂಡಿಸುವಂತೆ ಆರೋಗ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಅಜಯ್ ಸೇಠ್ ಅವರಿಗೆ ಸೂಚಿಸಿದರು ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆ ತಿಳಿಸಿದೆ.

Facebook Comments

Sri Raghav

Admin