ಲೈವ್ ಸುಸೈಡ್ : ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡ ಹೋಂಗಾರ್ಡ್

ಈ ಸುದ್ದಿಯನ್ನು ಶೇರ್ ಮಾಡಿ

Suicide--01

ಚಿಂತಾಮಣಿ, ಮೇ 29- ಜೀವನದಲ್ಲಿ ಜಿಗುಪ್ಸೆಗೊಂಡ ಹೋಂಗಾರ್ಡ್ ಕ್ರಿಮಿನಾಶಕ ಮಾತ್ರೆ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಸುನಿಲ್‍ಕುಮಾರ್ (30) ಆತ್ಮಹತ್ಯೆ ಮಾಡಿಕೊಂಡ ಹೋಂಗಾರ್ಡ್. ಬೆಂಗಳೂರಿನ ಹಲಸೂರಿನಲ್ಲಿ ಹೋಂಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಸುನಿಲ್‍ಕುಮಾರ್ ಅವರಿಗೆ ಮದುವೆಯಾಗಿದ್ದು, ಒಂದು ಮಗುವಿದೆ.

ಇದೇ 27ರಂದು ರಜೆ ಮೇಲೆ ತಮ್ಮ ಊರಾದ ಚಿಂತಾಮಣಿ ತಾಲೂಕಿನ ಮೂಡಚಿಂತಲಹಳ್ಳಿ ಗ್ರಾಮಕ್ಕೆ ಬಂದಿದ್ದ ಸುನಿಲ್‍ಕುಮಾರ್, ರಾತ್ರಿ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆಂದು ಹೇಳುತ್ತ, ಕ್ರಿಮಿನಾಶಕ ಮಾತ್ರೆ ಸೇವಿಸುತ್ತಿರುವ ದೃಶ್ಯವನ್ನು ಮನೆಯಲ್ಲೇ ಕುಳಿತು ಮೊಬೈಲ್‍ನಲ್ಲಿ ಸೆರೆ ಹಿಡಿಯುತ್ತಿದ್ದನು.

ಇದನ್ನು ಗಮನಿಸಿದ ಪೆÇೀಷಕರು ತಕ್ಷಣ ಮಾತ್ರೆ ಸೇವಿಸಿ ನಿತ್ರಾಣಗೊಂಡಿದ್ದ ಸುನಿಲ್‍ಕುಮಾರ್‍ನನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹೊಸಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
ಗ್ರಾಮಾಂತರ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Facebook Comments

Sri Raghav

Admin