ಕರ್ನಾಟಕದ ಕರಾವಳಿ ಜನರಿಗೆ ಟ್ವಿಟ್ಟರ್ ನಲ್ಲಿ ಸ್ಪಂದಿಸಿದ ಮೋದಿ

ಈ ಸುದ್ದಿಯನ್ನು ಶೇರ್ ಮಾಡಿ

modi-in-chamaraja-nagara

ಬೆಂಗಳೂರು, ಮೇ 29: ಕರಾವಳಿಯ ದಕ್ಷಿಣ ಕನ್ನಡ , ಉಡುಪಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ಪ್ರವಾವಾಹದ ಪರಸ್ಥಿತಿ ಉಂಟಾಗಿದೆ. ಈ ಕುರಿತು ಕರವಾಳಿಗರಿಗೆ ಸ್ಪಂದಿಸಿದ ಪ್ರಧಾನಿ ಮೋದಿ ‘ಕರ್ನಾಟಕದ ಕೆಲವು ಭಾಗದ ಜನ ಪ್ರವಾಹದಿಂದ ತೊಂದರೆಗೆ ಸಿಲುಕಿದ್ದು ಅವರ ಸುರಕ್ಷತೆಗಾಗಿ ನಾನು ಪ್ರಾರ್ಥಿಸುತ್ತೇನೆ’ ಎಂದು ಟ್ವೀಟ್ ಮಾಡಿದ್ದಾರೆ. ಅಲ್ಲಿನ ಪರಿಸ್ಥಿತಿಯ ಬಗ್ಗೆ ಅಧಿಕಾರಿಗಳೊಡನೆ ಮಾತನಾಡಿದ್ದು, ಸೂಕ್ತ ಸಹಾಯ ಒದಗಿಸುವಂತೆ ಸೂಚನೆ ನೀಡಿದ್ದೇನೆ ಎಂದು ಕೂಡ ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.

ದಕ್ಷಿಣ ಕನ್ನಡ, ಉಡುಪಿ, ಮಂಗಳೂರು ಜಿಲ್ಲೆಗಳಲ್ಲಿ ನಿನ್ನೆ ರಾತ್ರಿಯಿಂದ ಸುರಿದ ಭಾರಿ ಮಳೆಗೆ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಅಪಾರ ಪ್ರಮಾಣದ ಆಸ್ತಿ-ಪಾಸ್ತಿ ನಷ್ಟವಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮುಖ್ಯಮಂತ್ರಿಗಳು ರಕ್ಷಣಾ ಕಾರ್ಯಕ್ಕೆ ಅವಶ್ಯಕತೆ ಇದ್ದರೆ ಕೇಂದ್ರದ ನೆರವು ಪಡೆಯುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇನ್ನು ಮಳೆ ಇನ್ನೂ 2 ದಿನ ಮುಂದುವರೆಯುವ ಸಾಧ್ಯತೆಗಳಿದ್ದು, ಯಾವುದೇ ಅನಾಹುತಗಳಾಗದಂತೆ ರಕ್ಷಣಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

Facebook Comments

Sri Raghav

Admin