ವಿದ್ಯುತ್ ಶಾರ್ಟ್ ಸಕ್ರ್ಯೂಟ್’ನಿಂದ ರೈತ ಮತ್ತು ಹಸು ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Former

ಕಡೂರು, ಮೇ 30- ತಾಲೂಕಿನ ಎಸ್.ಬಿದರೆ ಗ್ರಾಮದಲ್ಲಿ ತುಂಡಾಗಿ ಬಿದ್ದಿದ್ದು, ತಂತಿಗೆ ಸಿಲುಕಿದ ಹಸುವನ್ನುರಕ್ಷಿಸಲು ಹೋದ ರೈತ ರಮೇಶ್ ಸಹ ವಿದ್ಯುತ್ ಸ್ಪರ್ಶಕ್ಕೆ ತುತ್ತಾಗಿರುವ ಘಟನೆ ನಡೆದಿದೆ.  ಮೆಸ್ಕಾಂ ಇಲಾಖೆಯವರು ವಿದ್ಯುತ್ ಲೈನ್ ಸರಿಪಡಿಸದೆ ಇರುವುದೇಈ ಅವಘಡಕ್ಕೆ ಕಾರಣ ಎಂದು ಸ್ಥಳೀಯರು ಆರೋಪ ಮಾಡಿರುತ್ತಾರೆ.  ರೈತನಿಗೆ ಸೂಕ್ತ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಒತ್ತಾಯ ಮಾಡಿರುತ್ತಾರೆ. ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದರು.ಪರಿಹಾರದ ವಿಚಾರವಾಗಿ ಪ್ರಶ್ನಿಸಿದಾಗ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ ಎಂದರು. ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Facebook Comments

Sri Raghav

Admin