ಕರಾವಳಿಯಲ್ಲಿ ಪ್ರವಾಹ : ಸಂತ್ರಸ್ತರ ರಕ್ಷಣೆ, ತುರ್ತು ಪರಿಹಾರದ ಬಗ್ಗೆ ಮಾಹಿತಿ ಪಡೆದ ಎಚ್’ಡಿಕೆ

ಈ ಸುದ್ದಿಯನ್ನು ಶೇರ್ ಮಾಡಿ

kumara-swmy-1

ಬೆಂಗಳೂರು, ಮೇ 30- ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಕರಾವಳಿ ಭಾಗದಲ್ಲಿ ಸುರಿಯುತ್ತಿರುವ ಭಾರೀ ಮಳೆಯನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಸಂತ್ರಸ್ತರ ರಕ್ಷಣೆ ಹಾಗೂ ತುರ್ತು ಪರಿಹಾರ ತೀವ್ರಗೊಳಿಸುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದು, ಸಕಲ ರೀತಿಯ ನೆರವು ನೀಡುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.  ಇಂದು ಬೆಳಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಗಳೊಂದಿಗೆ ದೂರವಾಣಿ ಮೂಲಕ ಮಾಹಿತಿ ಪಡೆದ ಮುಖ್ಯಮಂತ್ರಿಗಳು, ನೆರೆ ಪೀಡಿತ ಪ್ರದೇಶಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಆದೇಶ ನೀಡಿದ್ದಾರೆ. ತೀವ್ರ ಮಳೆಯಿಂದ ಜನರ ಪ್ರಾಣ ಹಾನಿ ತಪ್ಪಿಸಲು ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ. ಜಿಲ್ಲಾಡಳಿತದೊಂದಿಗೆ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ನಿರಂತರ ಸಂಪರ್ಕ ದಲ್ಲಿದ್ದು, ಪರಿಸ್ಥಿತಿಯನ್ನು ಅವಲೋಕಿಸುತ್ತಿದ್ದಾರೆ ಎಂದರು.

ಮಳೆ ಸಂತ್ರಸ್ತರಿಗೆ ರಕ್ಷಣವೇ ಮೂಲ ಸೌಕರ್ಯ ಹಾಗೂ ಪರಿಹಾರ ಒದಗಿಸು ವಂತೆ ಸೂಚಿಸಲಾಗಿದೆ. ಮಳೆ ಪೀಡಿತ ಜಿಲ್ಲೆಗೆ ಸರ್ಕಾರ ಹೆಚ್ಚುವರಿ ಅತಿ ವೃಷ್ಟಿ ಅನುದಾನ ನೀಡಲು ಸಿದ್ಧವಿದ್ದು, ಹಾನಿಗೀಡಾದ ರಸ್ತೆ, ವಿದ್ಯುತ್ ಸಂಪರ್ಕ ಗಳನ್ನು ದುರಸ್ತಿಗೊಳಿಸಲು ಕ್ರಮ ಕೈಗೊಳ್ಳಬೇಕು. ಕಡಲ ಕೊರೆತದ ಬಗ್ಗೆ ತೀವ್ರ ನಿಗಾ ವಹಿಸುವಂತೆ ಸೂಚಿಸಿರುವುದಾಗಿ ತಿಳಿಸಿದ್ದಾರೆ. ಈಗಾಗಲೇ ಮಂಗಳೂರು ಮತ್ತು ಉಡುಪಿ ಜಿಲ್ಲೆಗಳಿಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಕಷ್ಟದಲ್ಲಿದ್ದವರನ್ನು ಪಾರು ಮಾಡುವ ಕೆಲಸದಲ್ಲಿ ತೊಡಗಿದೆ. ಜನತೆಗೆ ಅಗತ್ಯ ವಸ್ತುಗಳ ವಿತರಣೆಗೂ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

Facebook Comments

Sri Raghav

Admin