ರೈತರ ಬೆನ್ನಲ್ಲೇ, 1100 ಕೋಟಿ ರೂ. ಸಾಲ ಮನ್ನಾಕ್ಕೆ ಮನವಿ ಮಾಡಿದ ಸ್ತ್ರೀಶಕ್ತಿ ಸಂಘಗಳು

ಈ ಸುದ್ದಿಯನ್ನು ಶೇರ್ ಮಾಡಿ

kummaraswamy

ಕೋಲಾರ, ಮೇ 30- ರಾಜ್ಯದಲ್ಲಿನ ಸ್ತ್ರೀ ಶಕ್ತಿ ಸಂಘಗಳ 1100 ಕೋಟಿ ರೂ. ಸಾಲ ಮನ್ನಾ ಮಾಡುವಂತೆ ರಾಜ್ಯ ಕೃಷಿ ಮಾರಾಟ ಮಹಾ ಮಂಡಳಿ ಮಾಜಿ ಸದಸ್ಯೆ ಕುರ್ಕಿ ರಾಜೇಶ್ವರಿ ಮತ್ತು ಕೆಜಿಎಫ್ ಶಾಸಕಿ ರೂಪಕಲಾ ಹಾಗೂ ಮುಖ್ಯಮಂತ್ರಿ ಹೆಚ್.ಡಿ. ಕುಮಾರ ಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.
ಬೆಂಗಳೂರಿನ ಜೆಪಿ ನಗರದಲ್ಲಿನ ನಿವಾಸದಲ್ಲಿದ್ದ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿನ ಸ್ತ್ರೀ ಶಕ್ತಿ ಸಂಘಗಳ ಪೈಕಿ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗೆ ಡಿಸಿಸಿ ಬ್ಯಾಂಕ್ ಮೂಲಕ ಕೋಟ್ಯಾಂತರ ರೂಪಾಯಿ ಸಾಲವನ್ನು ಸ್ತ್ರೀ ಶಕ್ತಿ ಸಂಘಗಳಿಗೆ ವಿತರಣೆ ಮಾಡಿದ್ದನ್ನು ಗಮನಕ್ಕೆ ತಂದರು. ಅದರಂತೆಯೇ ಮಹಿಳಾ ಸಂಘಗಳು ಸಕಾಲಕ್ಕೆ ಸಾಲವನ್ನು ಮರುಪಾವತಿ ಮಾಡುತ್ತಿದ್ದಾರೆ. ಎಲ್ಲಿಯೂ ಸಾಲವನ್ನು ದುರುಪಯೋಗ ಪಡಿಸಿಕೊಂಡಿಲ್ಲ, ರಾಜ್ಯದಲ್ಲಿ ಕೋಲಾರ-ಚಿಕ್ಕಬಳ್ಳಾಪುರ ನಂಬರ್ ಸ್ಥಾನದಲ್ಲಿದೆ ಎಂದು ಮನವರಿಕೆ ಮಾಡಿಕೊಟ್ಟರು.

ರಾಜ್ಯದಲ್ಲಿರುವ 1100 ಕೋಟಿ ರೂಪಾಯಗಳ ಸಾಲವನ್ನು ಮನ್ನಾ ಮಾಡಿದರೆ ಎಷ್ಟೋ ಬಡ ಕುಟುಂಬಗಳು ನಿಮ್ಮ ಋಣದಲ್ಲಿರುತ್ತಾರೆ ಎಂದು ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮಾತನಾಡಿ, ಚುನಾವಣೆಯ ಸಂದರ್ಭದಲ್ಲಿ ನಾನು ರೈತರ-ಸ್ತ್ರೀ ಶಕ್ತಿ ಸಂಘಗಳ ಸಾಲವನ್ನು ಮನ್ನಾ ಮಾಡೋದಾಗಿ ಹೇಳಿದ್ದೇ. ಆದರೆ ರಾಜ್ಯದಲ್ಲಿ ಜೆಡಿಎಸ್ ಸರ್ಕಾರ ಬಹುಮತದಿಂದ ಅಧಿಕಾರಕ್ಕೆ ಬರಲು ಸಾಧ್ಯವಾಗಲಿಲ್ಲ. ಆದರೂ ಕೂಡ ಸಮ್ಮಿಶ್ರ ಸರ್ಕಾರದಲ್ಲಿ ಕಾಂಗ್ರೆಸ್ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ರೈತರ ಹಾಗೂ ಸ್ತ್ರೀ ಶಕ್ತಿ ಸಂಘಗಳ ಸಾಲವನ್ನು ಸಂಪೂರ್ಣ ಮನ್ನಾ ಮಾಡುವುದಾಗಿ ಭರವಸೆ ನೀಡಿದರು. ನರಸಾಪುರ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಹರೀಶ್‍ಗೌಡ, ಯುವ ಮುಖಂಡ ಶ್ರೀಕಾಂತ್‍ಗೌಡ ಹಾಜರಿದ್ದರು.

Facebook Comments