ಆರ್ ಆರ್ ನಗರ ರಿಸಲ್ಟ್ ಬಗ್ಗೆ ಸಿಎಂ ಕುಮಾರಸ್ವಾಮಿ ಹೇಳಿದ್ದೇನು..?

ಈ ಸುದ್ದಿಯನ್ನು ಶೇರ್ ಮಾಡಿ

kumara-swmy
ಬೆಂಗಳೂರು, ಮೇ 31-ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಬಾರದು ಎಂಬ ಉದ್ದೇಶದಲ್ಲಿ ನಾವು ಯಶಸ್ವಿಯಾಗಿದ್ದೇವೆ. ಜೆಡಿಎಸ್‍ನ ಫಲಿತಾಂಶದ ಬಗ್ಗೆ ತಲೆಕೆಡಿಸಿಕೊಂಡಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಹೇಳಿದರು. ಮುಂದೂಡಲ್ಪಟ್ಟಿದ್ದ ರಾಜರಾಜೇಶ್ವರಿ ಕ್ಷೇತ್ರದ ಚುನಾವಣಾ ಫಲಿತಾಂಶದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರಕ್ರಿಯೆ ನೀಡಿದ ಅವರು, ಕಾಂಗ್ರೆಸ್ ಅಥವಾ ಜೆಡಿಎಸ್ ಅಭ್ಯರ್ಥಿ ಗೆಲ್ಲಬೇಕಿತ್ತು. ಕಾಂಗ್ರೆಸ್ ಗೆದ್ದಿದ್ದೆ. ಬಿಜೆಪಿ ಗೆಲ್ಲಬಾರದೆಂಬ ಸೂಚನೆ ಕೊಟ್ಟಿದ್ದೆವು. ಅದರಲ್ಲಿ ಯಶಸ್ವಿಯಾಗಿದ್ದೇವೆ ಎಂದರು.

ಡಿ.ಕೆ.ಶಿವಕುಮಾರ್ ಅವರ ಆಪ್ತರ ನಿವಾಸಿಗಳ ಮೇಲೆ ಸಿಬಿಐ ದಾಳಿ ನಡೆಸಲಿವೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ, ಅವೆಲ್ಲ ಕೇಂದ್ರ ಸರ್ಕಾರಕ್ಕೆ ಸಂಬಂಧಪಟ್ಟ ಸಂಸ್ಥೆಗಳು ಎಂದು ಹೇಳಿದರು.

Facebook Comments

Sri Raghav

Admin