ಪಾತಕಿ ದಾವೂದ್ ಆಪ್ತ ಮಹಮದ್ ಲಂಬು ಅರೆಸ್ಟ್

ಈ ಸುದ್ದಿಯನ್ನು ಶೇರ್ ಮಾಡಿ

Dawood-Ibarhim

ಅಹಮದಾಬಾದ್, ಜೂ. 1-ಕುಖ್ಯಾತ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಆಪ್ತ ಹಾಗೂ 1993ರ ಮುಂಬೈ ಸರಣಿ ಸ್ಫೋಟದ ಆರೋಪಿ ಮಹಮದ್ ಲಂಬು ಪೊಲೀಸರ ಬಲೆಗೆ ಬಿದ್ದಿದ್ದಾನೆ.   ಗುಜರಾತ್‍ನ ವಲ್ಯಾಡ್‍ನಲ್ಲಿ ಭಯೋತ್ಪಾದನೆ ನಿಗ್ರಹ ದಳ (ಎಟಿಎಸ್) ಸಿಬ್ಬಂದಿ ಲಂಬುನನ್ನು ಬಂಧಿಸಿದರು. ಆರೋಪಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿದ್ದು, ಮಹತ್ವದ ಮಾಹಿತಿಗಳನ್ನು ಕೆಲ ಹಾಕಲಾಗುತ್ತಿದೆ.

ಅಂತಾರಾಷ್ಟ್ರೀಯ ಕುಖ್ಯಾತಿಯ ಭಯೋತ್ಪಾದಕ ದಾವೂದ್ ಇಬ್ರಾಹಿಂನ ಡಿ-ಕಂಪನಿಯಲ್ಲಿ ಸಕ್ರಿಯ ಸದಸ್ಯನಾಗಿದ್ದ ಲಂಬು ಹಲವಾರು ಅಪರಾಧ ಕೃತ್ಯಗಳಲ್ಲಿ ಬೇಕಾಗಿದ್ದ. 1993ರ ಮುಂಬೈ ಸ್ಫೋಟ ಪ್ರಕರಣದಲ್ಲೂ ಈತ ಪ್ರಮುಖ ಆರೋಪಿಗಳಲ್ಲಿ ಒಬ್ಬನಾಗಿದ್ದ. ದಾವೂದ್ ಅಣತಿಯಂತೆ ಈತ ಮಹಾರಾಷ್ಟ್ರ, ಗುಜರಾತ್ ಮೊದಲಾದ ರಾಜ್ಯಗಳಲ್ಲಿ ಹಲವರು ಕಾನೂನುಬಾಹಿರ ಕೃತ್ಯಗಳನ್ನು ಎಸಗಿದ್ದ.   1993ನೇ ಮಾರ್ಚ್ 12ರಂದು ಮುಂಬೈನಲ್ಲಿ ನಡೆದ 12 ಸರಣಿ ಬಾಂಬ್ ಸ್ಫೋಟಗಳಲ್ಲಿ 257 ಮಂದಿ ಹತರಾಗಿ, 717 ಜನರು ತೀವ್ರ ಗಾಯಗೊಂಡಿದ್ದರು.

Facebook Comments

Sri Raghav

Admin