ಜೂ.8ರಂದು ನಡೆಯಬೇಕಿದ್ದ ಪಿಯುಸಿ ಪೂರಕ ಪರೀಕ್ಷೆ ಮುಂದೂಡಿಕೆ

ಈ ಸುದ್ದಿಯನ್ನು ಶೇರ್ ಮಾಡಿ

PUC-Result--01
ಬೆಂಗಳೂರು, ಜೂ. 1: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಜೂ.8ರಂದು ನಿಗದಿಯಾಗಿದ್ದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ಜೂ.29ಕ್ಕೆ ಮುಂದೂಡಲಾಗಿದೆ. ಈ ಕುರಿತು ಪದವಿ ಪೂರ್ವ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಜೂ. 8ಕ್ಕೆ ಶಿಕ್ಷಕ ಮತ್ತು ಪದವೀಧರ ಕ್ಷೇತ್ರಗಳಿಂದ ವಿಧಾನ ಪರಿಷತ್‌ಗೆ ನಡೆಯಲಿರುವ ಚುನಾವಣೆ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಲಾಗಿದೆ ಎಂದು ತಿಳಿಸಿದೆ. ಅಲ್ಲದೆ, ಜೂ.11ರಂದು ಜಯನಗರ ಕ್ಷೇತ್ರದ ವಿಧಾನಸಭೆ ಮತ್ತು ಜೂ.21ರಿಂದ 28ರ ವರೆಗೆ ಎಸೆಸೆಲ್ಸಿ ಪೂರಕ ಪರೀಕ್ಷೆ ಅದೇ ಪರೀಕ್ಷಾ ಕೇಂದ್ರದಲ್ಲಿ ನಡೆಯುವುದರಿಂದ ಪೂರಕ ಪರೀಕ್ಷೆಯನ್ನು ಜೂ.29ರಂದು ನಡೆಸಲು ಇಲಾಖೆ ತೀರ್ಮಾನಿಸಿದೆ ಎಂದು ಗೊತ್ತಾಗಿದೆ.

Facebook Comments

Sri Raghav

Admin