ಹೊಲ ಉಳುಮೆ ಮಾಡುತ್ತಿದ್ದಾಗ ಟ್ರ್ಯಾಕ್ಟರ್ ಪಲ್ಟಿಯಾಗಿ ರೈತ ಸ್ಥಳದಲ್ಲೇ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Sriramanakoppa--01

ಹಾವೇರಿ. ಜೂ. 01 : ಜಮೀ ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ಪಲ್ಟಿಯಾಗಿ ಚಲಾಯಿಸುತ್ತಿದ್ದ ರೈತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಿರೇಕೆರೂರು ತಾಲೂಕಿನ ಶ್ರೀರಾಮನಕೊಪ್ಪ ಗ್ರಾಮದಲ್ಲಿ ನಡೆದಿದೆ. ಮೃತ ರೈತನನ್ನು ನಿಂಗಪ್ಪ ಆರಿಕಟ್ಟಿ (60) ಎಂದು ಗುರುತಿಸಲಾಗಿದೆ. ಗುರುವಾರ ಮಧ್ಯರಾತ್ರಿ ತನ್ನ ಜಮೀನು ಸಾಗುವಳಿ ಮಾಡುತ್ತಿದ್ದಾಗ ಟ್ರ್ಯಾಕ್ಟರ್ ಪಲ್ಟಿಯಾಗಿ ಅವಘಡ ಸಂಭವಿಸಿದೆ. ನಸುಕಿನ ಜಾವ ಆ ಅವಘಡ ಸಂಭವಿಸಿದ್ದು, ಸುತ್ತ ಮುತ್ತ ಯಾರು ಇಲ್ಲದ ಕಾರಣ ರೈತ ನಿಂಗಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಳಗಿನ ಜಾವ ಸಂಬಂಧಿಕರು ನೋಡಿದಾಗ ನಿಂಗಪ್ಪ ಸಾವನ್ನಪ್ಪಿದ್ದಾನೆ ತಂದು ತಿಳಿದುಬಂದಿದೆ. ಈ ಪ್ರಕರಣ ಕುರಿತು ಹಂಸಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments

Sri Raghav

Admin