ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆಯನ್ನು ಸೆರೆಹಿಡಿದ ಅರಣ್ಯ ಇಲಾಖೆ ಸಿಬ್ಬಂದಿ

ಈ ಸುದ್ದಿಯನ್ನು ಶೇರ್ ಮಾಡಿ

Chirate--01

ಕಡೂರು, ಜೂ.2- ತಾಲೂಕಿನ ಶಿವನಗಿರಿ ತಪ್ಪಲಿನ ಸೋಮನಾಥಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಹೊರ ವಲಯದಲ್ಲಿ ಕಾಣಿಸಿಕೊಂಡಿದ್ದ ಚಿರತೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿದಿದ್ದಾರೆ. ಬಹಳ ದಿನಗಳಿಂದ ಗ್ರಾಮಸ್ಥರಿಗೆ ಚಿರತೆ ಆಗಾಗ ಕಾಣಿಸಿಕೊಳ್ಳುತ್ತಿತ್ತು. ಇದರಿಂದ ಭಯಭೀತರಾಗಿದ್ದ ಜನತೆ ಚಿರತೆಯನ್ನು ಹಿಡಿದು ದೂರದ ಕಾಡಿಗೆ ಬಿಡುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು.

ಆಹಾರ ಹುಡುಕಿಕೊಂಡು ತಾನಾಗಿಯೆ ಗ್ರಾಮದೊಳಗೆ ಆಗಮಿಸಿದ ಚಿರತೆಯನ್ನು ಗ್ರಾಮಸ್ಥರ ಸಮಯ ಪ್ರಜ್ಞೆಯಿಂದ ಅರಣ್ಯ ಇಲಾಖೆ ಸಿಬ್ಬಂದಿ, ಹಾಗೂ ವಲಯ ಅರಣ್ಯಾಧಿಕಾರಿ ಮೋಹನ್ ನಾಯ್ಕ ನೇತೃತ್ವದ ತಂಡದವರು ಕಾರ್ಯಾಚರಣೆ ನಡೆಸಿ ಸಾರ್ವಜನಿಕರ ಸಹಕಾರದೊಂದಿಗೆ ಚಿರತೆಯನ್ನು ಬೋನಿನಲ್ಲಿ ಬಂಧಿಸಿ ತೆಗೆದುಕೊಂಡು ಹೋಗಿದ್ದಾರೆ. ಬಂಧಿತ ಚಿರತೆಯನ್ನು ದೂರದ ಕಾಡಿಗೆ ಬಿಡುವುದಾಗಿ ವಲಯ ಅರಣ್ಯಾಧಿಕಾರಿ ಮೋಹನ್‍ನಾಯ್ಕ ತಿಳಿಸಿದ್ದರಿಂದ ಗ್ರಾಮಸ್ಥರೀಗ ನಿಟ್ಟುಸಿರು ಬಿಟ್ಟಿದ್ದಾರೆ.

Facebook Comments

Sri Raghav

Admin