ಹಾಡಹಗಲೇ ಮನೆಗೆ ಕನ್ನ, ಚಿನ್ನಾಭರಣ ಲೂಟಿ

ಈ ಸುದ್ದಿಯನ್ನು ಶೇರ್ ಮಾಡಿ

rob-1

ಬೆಂಗಳೂರು, ಜೂ.2- ಹಾಡಹಗಲೇ ಮನೆಯೊಂದರ ಬೀಗ ಒಡೆದು ಒಳನುಗ್ಗಿದ ಚೋರರು 250 ರಿಂದ 300 ಗ್ರಾಂ ಚಿನ್ನಾಭರಣವನ್ನು ಕದ್ದೊಯ್ದಿರುವ ಘಟನೆ ವಿಜಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ವಿಜಯನಗರದ ಆರ್‍ಪಿಸಿ ಲೇಔಟ್ ಒಂದನೇ ಸಿ ಕ್ರಾಸ್ ನಿವಾಸಿ ವೀರಭದ್ರಯ್ಯ ಎಂಬುವರ ಮನೆಯಲ್ಲಿ ಈ ಕಳ್ಳತನ ನಡೆದಿದೆ.

ನಿನ್ನೆ ಬೆಳಿಗ್ಗೆ 10.30ರಲ್ಲಿ ವೀರಭದ್ರಯ್ಯ ಕುಟುಂಬದವರು ಮನೆಗೆ ಬೀಗ ಹಾಕಿಕೊಂಡು ಹೊರಗೆ ಹೋಗಿದ್ದರು. ಈ ಸಂದರ್ಭದಲ್ಲಿ ಕಳ್ಳರು ಇವರ ಮನೆಯ ಬೀಗ ಒಡೆದು ಒಳನುಗ್ಗಿ ಬೀರುವನ್ನು ಮೀಟಿ ಅದರಲ್ಲಿದ್ದ ವಸ್ತುಗಳನ್ನೆಲ್ಲ ಚೆಲ್ಲಾಪಿಲ್ಲಿ ಮಾಡಿ ಸುಮಾರು 250 ರಿಂದ 300 ಗ್ರಾಂ ತೂಕದ ಚಿನ್ನಾಭರಣವನ್ನು ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದಾರೆ. ಸಂಜೆ 4.30ರಲ್ಲಿ ಮನೆಗೆ ವಾಪಸ್ ಆದಾಗಲೇ ಮನೆಯಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಕಳ್ಳತನದ ಬಗ್ಗೆ ವಿಜಯನಗರ ಪೊಲೀಸರಿಗೆ ತಿಳಿಸಿದ್ದು, ಶ್ವಾನದಳ, ಬೆರಳಚ್ಚು ತಜ್ಞರು ಹಾಗೂ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಕಳ್ಳರ ಪತ್ತೆಗೆ ಶೋಧ ಕೈಗೊಂಡಿದ್ದಾರೆ.

Facebook Comments

Sri Raghav

Admin