ಅಪಘಾತದಲ್ಲಿ ಹೆಡ್‍ ಕಾನ್ಸ್ಟೇಬಲ್ ಸಾವು ಕುರಿತು ವರದಿ ಸಲ್ಲಿಸಲು ಸಿಎಂ ಸೂಚನೆ

ಈ ಸುದ್ದಿಯನ್ನು ಶೇರ್ ಮಾಡಿ

Kumaraswamy--01-C-CM
ಬೆಂಗಳೂರು, ಜೂ.3- ನಗರದ ಹೆಬ್ಬಾಳ ಮೇಲ್ಸೇತುವೆ ಬಳಿ ನಿನ್ನೆ ರಾತ್ರಿ ಕರ್ತವ್ಯ ನಿರತ ವಯ್ಯಾಲಿ ಕಾವಲ್ ಪೊಲೀಸ್ ಠಾಣೆಯ ಹೆಡ್‍ ಕಾನ್ಸ್ಟೇಬಲ್ ವಿ.ದಯಾನಂದ್ ಅಪಘಾತದಲ್ಲಿ ಮೃತಪಟ್ಟ ಪ್ರಕರಣದ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ನಗರ ಪೊಲೀಸ್ ಆಯುಕ್ತರಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ಮೃತಪಟ್ಟ ದಯಾನಂದ್ ಅವರ ಕುಟುಂಬಕ್ಕೆ ಅಗತ್ಯ ಪರಿಹಾರ ನೀಡಲು ಮುಖ್ಯಮಂತ್ರಿಗಳು ಆದೇಶಿಸಿದ್ದಾರೆ. ದಯಾನಂದ್ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿರುವ ಮುಖ್ಯಮಂತ್ರಿಯವರು ಮೃತರ ಕುಟುಂಬ ವರ್ಗದವರಿಗೆ ಸಾಂತ್ವನ ಸೂಚಿಸಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

Facebook Comments

Sri Raghav

Admin