ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು

ಈ ಸುದ್ದಿಯನ್ನು ಶೇರ್ ಮಾಡಿ

Car-Fire

ಬೆಳಗಾವಿ,ಜೂ.3 -ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು , ಸಂಪೂರ್ಣ ಕಾರು ಸುಟ್ಟು ಹೋಗಿರುವ ಘಟನೆ ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಿವಾಜಿನಗರದ ಜೈನ್ ಹೌಸಿಂಗ್ ಕಾಲೋನಿಯ ರಸ್ತೆ ಬದಿ ನಿಲ್ಲಿಸಿದ್ದ ಬೆಂಜ್ ಕಾರಿಗೆ ಕಿಡಿಗೇಡಿಗಳು ಮಧ್ಯರಾತ್ರಿ 3 ಗಂಟೆ ಸುಮಾರಿನಲ್ಲಿ ಬೆಂಕಿ ಹಚ್ಚಿದ್ದಾರೆ. ಬೆಂಕಿಯ ಕೆನ್ನಾಲಗೆಗೆ ಬೆಂಜ್ ಕಾರು ಸಂಪೂರ್ಣ ಸುಟ್ಟುಹೋಗಿದೆ. ಕೂಡಲೇ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಾರು ಮಾಲೀಕರ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು, ಕಿಡಿಗೇಡಿಗಳ ಹುಡುಕಾಟಕ್ಕೆ ಬಲೆ ಬೀಸಿದ್ದಾರೆ.

Facebook Comments

Sri Raghav

Admin