ಅನಾರೋಗ್ಯದಿಂದ ಬೇಸತ್ತು ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

Man-Suicide-Firing

ಬೆಳಗಾವಿ, ಜೂ.4- ಅನಾರೋಗ್ಯದಿಂದ ಬೇಸತ್ತ ವ್ಯಕ್ತಿಯೊಬ್ಬ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವಿಜಯನಗರ ನಿವಾಸಿ ಶೈಲೇಶ್ ಶರತ್ ಜೋಷಿ (42) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಈತ ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದು , ಹಲವು ಬಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡರೂ ಗುಣಮುಖವಾಗದ ಹಿನ್ನೆಲೆಯಲ್ಲಿ ಮನ ನೊಂದು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಸ್ಥಳಕ್ಕೆ ಕ್ಯಾಂಪ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Facebook Comments

Sri Raghav

Admin