ಹೊಟ್ಟೆನೋವು ತಾಳಲಾರದೆ ಯುವತಿ ನೇಣಿಗೆ ಶರಣು

ಈ ಸುದ್ದಿಯನ್ನು ಶೇರ್ ಮಾಡಿ

Suicide-Hang-Girl

ಗೌರಿಬಿದನೂರು, ಜೂ.5- ಹೊಟ್ಟೆನೋವಿನಿಂದ ಬಳಲುತ್ತಿದ್ದ ಯುವತಿಯೊಬ್ಬಳು ಜೀವನದಲ್ಲಿ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ದೊಡ್ಡಕುರುಗೋಡು ಗ್ರಾಮದಲ್ಲಿ ನಡೆದಿದೆ.  ದೊಡ್ಡಕುರುಗೋಡು ಗ್ರಾಮದ ನಾಗಪ್ಪ ಎಂಬುವರ ಮಗಳು ಲಕ್ಷ್ಮೀದೇವಿ(20) ಆತ್ಮಹತ್ಯೆ ಮಾಡಿಕೊಂಡ ಯುವತಿ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣಿಗೆ ಶರಣಾಗಿರುವ ಯುವತಿ, ಕಳೆದೊಂದು ವರ್ಷದಿಂದಲೂ ಹೊಟ್ಟೆನೋವಿನಿಂದ ಬಳಲುತ್ತಿದ್ದು , ಚಿಕಿತ್ಸೆಗೆ ಹಣ ಹೊಂದಿಸಲು ಸಾಧ್ಯವಾಗದ ಕಾರಣ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ. ಈ ಸಂಬಂಧ ಗ್ರಾಮಾಂತರ ಠಾಣೆಯ ಎಸ್‍ಐ ರವಿಕುಮಾರ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Facebook Comments

Sri Raghav

Admin