ದೇವರಾಜ ಅರಸು ಅವರ 36ನೇ ಪುಣ್ಯಸ್ಮರಣೆ, ಸಿಎಂ ನಮನ

ಈ ಸುದ್ದಿಯನ್ನು ಶೇರ್ ಮಾಡಿ

Devaraj-Arasu

ಬೆಂಗಳೂರು, ಜೂ.6-ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರು ಹಾಕಿಕೊಟ್ಟಿರುವ ಮೇಲ್ಪಂಕ್ತಿಯನ್ನು ಗಮನದಲ್ಲಿಟ್ಟುಕೊಂಡು ಆಡಳಿತ ನಡೆಸುವುದಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ವಿಧಾನಸೌಧದ ಆವರಣದಲ್ಲಿರುವ ದೇವರಾಜ ಅರಸು ಅವರ ಪ್ರತಿಮೆಗೆ 36ನೇ ಪುಣ್ಯಸ್ಮರಣೆ ಅಂಗವಾಗಿ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಅರಸು ಅವರು ಕೇವಲ ಹಿಂದುಳಿದ ವರ್ಗದ ನಾಯಕರಷ್ಟೇ ಅಲ್ಲ, ಅವರು ರಾಜ್ಯಮಟ್ಟದ ಶ್ರೇಷ್ಟ ನಾಯಕರಾಗಿದ್ದರು. ಅವರು ಜನಪರ ಕಾರ್ಯಕ್ರಮಗಳ ಅನುಷ್ಠಾನ ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿದ ಮೇರುಪರ್ವತವಾಗಿದ್ದರು ಎಂದು ಸ್ಮರಿಸಿದರು.

ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಆತಂಕವಿಲ್ಲ. ಎಲ್ಲವೂ ಸರಿಯಾಗಿದ್ದು, ಸುಗಮವಾಗಿ ನಡೆಯಲಿದೆ ಎಂದ ಅವರು, ಅರಸು ಅವರು ಹಾಕಿಕೊಟ್ಟ ತಳಹದಿಯಲ್ಲಿ ಸಮ್ಮಿಶ್ರ ಸರ್ಕಾರದ ಆಡಳಿತ ನಡೆಯಲಿದೆ ಎಂದು ಪುನರುಚ್ಚರಿಸಿದರು. ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಮಾಜಿ ಸಚಿವ ಎಚ್.ಆಂಜನೇಯ, ಎಚ್.ವಿಶ್ವನಾಥ್, ಮಾಜಿ ಶಾಸಕ ಸುರೇಶ್‍ಬಾಬು, ಸರ್ಕಾರದ ಮುಖ್ಯಕಾರ್ಯದರ್ಶಿ ಕೆ.ರತ್ನಪ್ರಭಾ, ರಾಜ್ಯ ಹಿಂದುಳಿದ ವರ್ಗಗಳ ಇಲಾಖೆ ಕಾರ್ಯದರ್ಶಿ ಮಹಮ್ಮದ್ ಮೊಹಿಸಿನ್, ವಿಧಾನಪರಿಷತ್ ಮುಖ್ಯ ಸಚೇತಕ ಐವಾನ್ ಡಿಸೋಜಾ ಮತ್ತಿತರರಿದ್ದರು.

Facebook Comments
( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ )

Sri Raghav

Admin