ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‍ನಲ್ಲಿ ಭಿನ್ನಮತ, ನೋ ಕಾಮೆಂಟ್ಸ್ ಅಂದ್ರು ಡಿಸಿಎಂ

ಈ ಸುದ್ದಿಯನ್ನು ಶೇರ್ ಮಾಡಿ

Parameshwar
ಬೆಂಗಳೂರು, ಜೂ.6- ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಕಾಂಗ್ರೆಸ್‍ನಲ್ಲಿ ಭಿನ್ನಮತ ಭುಗಿಲೆದ್ದಿರುವ ಬಗ್ಗೆ ಪ್ರತಿಕ್ರಿಯೆ ನೀಡಲು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ನಿರಾಕರಿಸಿದ್ದಾರೆ. ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಸಚಿವ ಸ್ಥಾನ ವಂಚಿತರು ಅಸಮಾಧಾನಗೊಂಡು ಹಲವರು ರಾಜೀನಾಮೆಗೆ ಮುಂದಾಗಿದ್ದಾರೆ. ಇದರಿಂದ ಸಮ್ಮಿಶ್ರ ಸರ್ಕಾರಕ್ಕೆ ತೊಂದರೆಯಾಗುವುದಿಲ್ಲವೆ ಎಂಬ ಪತ್ರಕರ್ತರ ಪ್ರಶ್ನೆಗೆ ಪಕ್ಷದ ಕಚೇರಿ ಬಳಿ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಪರಮೇಶ್ವರ್ ಅವರು ನೋ ಕಾಮೆಂಟ್ಸ್ ಎಂದಷ್ಟೇ ಹೇಳಿ ನುಣುಚಿಕೊಂಡರು.

ರಾಜ್ಯದಲ್ಲಿ ಮೈತ್ರಿ ಸರ್ಕಾರ ರಚನೆಯಾಗಿ ನೂತನ ಸಚಿವ ಸಂಪುಟ ಅಸ್ತಿತ್ವಕ್ಕೆ ಬರುತ್ತಿದ್ದು, ಸಾಕಷ್ಟು ಸಚಿವಾಕಾಂಕ್ಷಿಗಳಿದ್ದು, 15 ಸಚಿವರನ್ನಷ್ಟೇ ಕಾಂಗ್ರೆಸ್‍ನಿಂದ ಸಂಪುಟಕ್ಕೆ ಸೇರ್ಪಡೆ ಮಾಡಲಾಗುತ್ತಿದೆ. ಸಾಕಷ್ಟು ಹಿರಿಯರು, ಕಿರಿಯರನ್ನು ಕೈ ಬಿಡಲಾಗಿದೆ. ಇದರಿಂದ ಭಿನ್ನಮತ ಭುಗಿಲೆದ್ದಿದ್ದು, ಹಲವೆಡೆ ಪ್ರತಿಭಟನೆ, ಬೆಂಬಲಿಗರಿಂದ ಆಕ್ರೋಶ, ರಸ್ತೆ ತಡೆ ನಡೆದಿದೆ. ಯಾವುದರ ಬಗ್ಗೆಯೂ ಪರಮೇಶ್ವರ್ ಅವರು ತಲೆ ಕೆಡಿಸಿಕೊಂಡಂತೆ ಕಾಣಲಿಲ್ಲ. ಸುದ್ದಿಗಾರರ ಯಾವುದೇ ಪ್ರಶ್ನೆಗೆ ಅವರು ಉತ್ತರ ನೀಡಲಿಲ್ಲ.

Facebook Comments

Sri Raghav

Admin